Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಸೆ. 5ರವರೆಗೂ ಧಾರಾಕಾರ ಮಳೆ ಸಾಧ್ಯತೆ:- ಉಡುಪಿ-ದಕ್ಷಿಣ ಕನ್ನಡ ಸೇರಿ ಐದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗಿದ್ದು, ಸೆಪ್ಟೆಂಬರ್ 5ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ಸೇರಿದಂತೆ ಉತ್ತರ ಒಳನಾಡಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಮತ್ತು ಕೋಲಾರ ಜಿಲ್ಲೆಗಳಲ್ಲಿ ಸೆ.5ರವರೆಗೂ ವ್ಯಾಪಕ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ.

ಇನ್ನು, ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಉಳಿದಂತೆ ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಾಮರಾಜನಗರ, ತುಮಕೂರು ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವರದಿ: Team Inspiring You
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo