Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಗ್ರಾಮೀಣ ಪ್ರದೇಶದಲ್ಲಿ ನೆಟ್ವರ್ಕ್ ಸಮಸ್ಯೆ ಶೀಘ್ರದಲ್ಲಿ ಬಗೆಹರಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ26-11-2021

ನೆಟ್ವರ್ಕ್ ಸಮಸ್ಯೆ  ಶೀಘ್ರದಲ್ಲಿ ಬಗೆಹರಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
        ಉಡುಪಿ : ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ಮೊಬೈಲ್ ನೆಟ್ವರ್ಕ್ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ಜಿಲ್ಲೆಯಲ್ಲಿನ ವಿವಿಧ ಮೊಬೈಲ್ ಸಂಸ್ಥೆಗಳ  ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.
    ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ, ಜಿಲ್ಲಾಮಟ್ಟದ ದೂರ ಸಂಪರ್ಕ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

     ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್ವರ್ಕ್ ಸರಿಯಾಗಿ ದೊರೆಯದ ಕಾರಣ ಗ್ರಾಮೀಣ ಜನತೆ ತುರ್ತು ಸಂದರ್ಭದಲ್ಲಿ ಅಗತ್ಯ ನೆರವು ಪಡೆಯಲು, ಸಂಬAಧಪಟ್ಟ ಅಧಿಕಾರಿಗಳು ಹಾಗೂ  ತಮ್ಮ ಸಂಬAದಿಕರನ್ನು ಸಂಪರ್ಕಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳು ಸಹ ಆನ್ಲೈನ್ ಪಾಠಗಳನ್ನು ಕೇಳಲು ಸಾಕಷ್ಟು ಶ್ರಮ ಪಡುತ್ತಿದ್ದು, ನೆಟ್ವರ್ಕ್ ಸಂಪರ್ಕಕ್ಕಾಗಿ ಎತ್ತರದ ಮತ್ತು ಅಪಾಯಕಾರಿ ಸ್ಥಳಗಳನ್ನು ಆಶ್ರಯಿಸುತ್ತಿದ್ದಾರೆ. ಇಂತಹ ಪ್ರದೇಶಗಳಲ್ಲಿ ತ್ವರಿತಗತಿಯಲ್ಲಿ ಟವರ್ಗಳನ್ನು ಅಳವಡಿಸಿ, ನಿರಂತರವಾಗಿ ಮೊಬೈಲ್ ಸಂಪರ್ಕ ಹಾಗೂ ನಿಗದಿತ ವೇಗವನ್ನು  ದೊರಕಿಸುವಂತೆ ವಿವಿಧ  ಮೊಬೈಲ್ ಸಂಸ್ಥೆಗಳಿಗೆ ಕೂರ್ಮಾರಾವ್ ಎಂ.ಸೂಚಿಸಿದರು.
     ನೆಟ್ವರ್ಕ್ ಒದಗಿಸುವ ಸಂಸ್ಥೆಗಳು ಸಂಬAಧಪಟ್ಟ ಗ್ರಾಮ ಪಂಚಾಯತ್ಗಳಿಗೆ ಬಾಕಿ ಇರುವ ಶುಲ್ಕವನ್ನು ಶೀಘ್ರವಾಗಿ ಪಾವತಿಸಿ, ನಿರಪೇಕ್ಷಣಾ ಪತ್ರವನ್ನು ಪಡೆಯಬೇಕು. ಟವರ್ ಅಳವಡಿಕೆ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಪಡೆಯಲು ಭೂ ದಾಖಲೆಗಳ ವಿವರ ಹಾಗೂ ನಿರಪೇಕ್ಷಣ ಪತ್ರವನ್ನು ಮೆಸ್ಕಾಂ ಇಲಾಖೆಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
    ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕಂಡು ಬರುವ ನೆಟ್ವರ್ಕ್ ಸಮಸ್ಯೆ, ಗ್ರಾಮೀಣ ವೈಫೈ ಯೋಜನೆ (ಭಾರತ್ -ನೆಟ್) ಪ್ರಗತಿ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು.
    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಪೌರಾಯುಕ್ತ ಉದಯ ಶೆಟ್ಟಿ, ಜಿಲ್ಲೆಯಲ್ಲಿನ ವಿವಿಧ ಮೊಬೈಲ್ ಸಂಸ್ಥೆಗಳ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo