Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಶೀಘ್ರದಲ್ಲಿ ಕಡತಗಳನ್ನು ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ26-11-2021

ಶೀಘ್ರದಲ್ಲಿ ಕಡತಗಳನ್ನು ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
        ಉಡುಪಿ:- ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಚೇರಿಗಳ ಕಡತಗಳನ್ನು ಕಾಲಮಿತಿಯಲ್ಲಿ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
     ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ, ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಬೋಧಿಸಿ, ನಂತರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಜಿಲ್ಲಾಧಿಕಾರಿ ಕಚೇರಿ, ಎಲ್ಲಾ ತಾಲೂಕು ಕಚೇರಿಗಳು ಹಾಗೂ ಕುಂದಾಪುರ ಉಪ ವಿಭಾಗಾಧಿಕಾರಿ ಕಚೇರಿಗೆ ಸಂಬAಧಿಸಿದ ಕಡತಗಳನ್ನು ಇ-ಕಚೇರಿ ಮೂಲಕವೇ ತ್ವರಿತವಾಗಿ ವಿಲೇವಾರಿ ಮಾಡುವಂತೆ ಹಾಗೂ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು 2 ತಿಂಗಳ ಒಳಗೆ ಸಂಪೂರ್ಣ ಇ-ಕಚೇರಿ ಮೂಲಕ ಕಡತಗಳನ್ನು ನಿರ್ವಹಣೆ ಮಾಡಬೇಕು. ಈ ಕುರಿತಂತೆ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ಮತ್ತಿತರ ಮೂಲ ಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.  
    ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಕಡತಗಳನ್ನು ಸೂಕ್ತ ರೀತಿಯಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದರು.
     ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಪೌರಾಯುಕ್ತ ಉದಯ ಶೆಟ್ಟಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ:-ಉಡುಪಿ ಫಸ್ಟ್
1
  1. ಜಿಲ್ಲೆಯ ಎಲ್ಲಾ ಕಛೇರಿಗಳಲ್ಲಿ ಕಡತಗಳನ್ನು ವಿಲೇವಾರಿ ಮಾಡಲು ಕಾಲಮಿತಿ ನಿಗದಿ ಪಡಿಸಬೇಕು.ಜಿಲ್ಲಾಧಿಕಾರಿ ಕಛೇರಿಯಿಂದ ಈ ಬಗ್ಗೆ ಆಗಾಗ್ಗೆ ಪರಿಶೀಲನೆ ನಡೆಸುತ್ತಿರಬೇಕು. ಲಂಚಕ್ಕಾಗಿ ಕಡತಗಳನ್ನು ವಿಲೇವಾರಿ ಮಾಡದೇ ಬಾಕಿ ಉಳಿಸಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು

    ಪ್ರತ್ಯುತ್ತರಅಳಿಸಿ

Mega Menu

blogger
© all rights reserved
made with by templateszoo