ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್‌ನ ಹೊಸ ರೂಪಾಂತರ ತಳಿಗೆ (ಬಿ.1.1.529) 'ಓಮಿಕ್ರಾನ್' ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ ಎಂದು ಸಿಂಗಪುರ ಹೇಳಿದೆ.
ದಕ್ಷಿಣ ಆಫ್ರಿಕಾ, ಬೋಟ್ಸ್‌ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆಗೆ ಓಮಿಕ್ರಾನ್ ತಳಿಯೇ ಕಾರಣವಾಗಿರಬಹುದು.
ಈ ತಳಿಯ ಜಿನೋಮ್ ಸೀಕ್ವೆನ್ಸ್ ಅಧ್ಯಯನವನ್ನು ಸಿಂಗಪುರ ನಡೆಸಿತ್ತು. ಮೂಲ ಕೊರೊನಾವೈರಸ್ ಮತ್ತು ಹೆಚ್ಚು ವೇಗವಾಗಿ ಹರಡುವ ಸಾಮರ್ಥ್ಯವಿರುವ ಡೆಲ್ಟಾ ರೂಪಾಂತರ ತಳಿಗಿಂತಲೂ ವೇಗವಾಗಿ ಹರಡುವ ಸಾಮರ್ಥ್ಯ ಈ ತಳಿಗೆ ಇದೆ ಎಂಬುದು ಅಧ್ಯಯನದಲ್ಲಿ ಪತ್ತೆಯಾಗಿದೆ.
ಈ ಬಗ್ಗೆ ಭಾರತದಲ್ಲಿಯೂ ಪಾಸಿಟಿವ್ ಕಂಡುಬಂದ ಪ್ರಯಾಣಿಕರ ಮಾದರಿಗಳನ್ನು ಸೂಚಿತ ಜೆನೋಮ್ ಸೀಕ್ವೆನ್ಸಿಂಗ್ ಲ್ಯಾಬೋರೇಟರಿಗಳಿಗೆ ಕಳುಹಿಸುವುದನ್ನು ಖಾತರಿಪಡಿಸಬೇಕು ಎಂದು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.
ಭಾರತದಲ್ಲಿ ಶುಕ್ರವಾರ 10,549 ಹೊಸ ದೈನಂದಿನ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 488 ಮಂದಿ ಸೋಕಿತರು ಮೃತಪಟ್ಟಿದ್ದಾರೆ. 9,868 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಗುರುವಾರಕ್ಕೆ ಹೋಲಿಸಿದರೆ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ 15.6ರಷ್ಟು ಹೆಚ್ಚಾಗಿದೆ..
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ