Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಸರಿಗಮಪ ಕಾರ್ಯಕ್ರಮದಿಂದ ಗಂಗರಾಜು (ಹಂಸಲೇಖ) ದೂರ ಉಳಿದರೇ..? ಈ ಬಗ್ಗೆ ಜೀ ಕನ್ನಡ ಹೇಳಿದ್ದೇನು..?28-11-2021

ಸರಿಗಮಪ ಕಾರ್ಯಕ್ರಮದಿಂದ ಗಂಗರಾಜು (ಹಂಸಲೇಖ) ದೂರ ಉಳಿದರೇ..? ಈ ಬಗ್ಗೆ ಜೀ ಕನ್ನಡ ಹೇಳಿದ್ದೇನು..?

ಬೆಂಗಳೂರು:- ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಗಂಗರಾಜು (ಹಂಸಲೇಖ) ಅವರನ್ನು ಜೀ ಕನ್ನಡ ಸರಿಗಮಪ ಕಾರ್ಯಕ್ರಮದಿಂದ ಹೊರಗಿಟ್ಟಿದ್ದೆ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದ್ದವು ಈ ಬಗ್ಗೆ ಸದ್ಯ ಜೀ ಕನ್ನಡ ವಾಹಿನಿ ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಫೇಸ್ಬುಕ್‌ನಲ್ಲಿ ಸ್ಪಷ್ಟನೆ ನೀಡಿರುವ ಜೀ ಕನ್ನಡ ಬ್ಯುಸ್‌ನೆಸ್ ಹೆಡ್ ರಾಘವೇಂದ್ರ ಹುಣಸೂರು "ಮಹಾಗುರು ಗಳು ತಮ್ಮ ಆರೋಗ್ಯ ಮತ್ತು ವೈಯಕ್ತಿಕ ಕಾರಣದಿಂದ ಒಂದು ವಾರ ಹೊರಗುಳಿಯಲು ನಿರ್ಧರಿಸಿದರು. ನಾವು ಅವರ ನಿರ್ಧಾರವನ್ನು ಗೌರವಿಸಿ ವಿರಾಮ ತೆಗೆದುಕೊಳ್ಳಲು ಒಪ್ಪಿದೇವೆ" ಎಂದು ಬರೆದುಕೊಂಡಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿರುವ ಗಂಗರಾಜು (ಹಂಸಲೇಖ) ಅವರು ನನ್ನ ಆರೋಗ್ಯ ಸ್ಥಿರವಾಗಿದೆ. ಸರಿಗಮಪ ನನ್ನ ಪ್ರೀತಿಯ ಭೂಮಿಕೆ , ಅದು ಮನಸ್ಸು ಮನಸ್ಸುಗಳನ್ನು ನೇಯುವ ವೇದಿಕೆ, ಸುಧಾರಣೆಗಳ ಸುಂದರ ಕಥೆಗಳನ್ನು ಓದಿಕೊಳ್ಳುತ್ತಿದ್ದೇನೆ , ಬೇಗ ಬಂದು ಸೇರಿಕೊಳ್ಳುತ್ತೇನೆ ಎಂದು ರಾಘವೇಂದ್ರ ಹುಣಸೂರು ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನು ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಮೊನ್ನೆಯಷ್ಟೇ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸಿದ್ದ ಗಂಗರಾಜು (ಹಂಸಲೇಖ) ಹಿಂದೂ ಪರ ಸಂಘಟನೆಗಳ ಪ್ರತಿಭಟನೆಯ ಬಿಸಿಯನ್ನು ಎದುರಿಸಿದ್ದರು.

ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo