ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕುಚ್ಚೂರಿನಲ್ಲಿ ಚಿರತೆಯೊಂದು ಮಹಿಳೆಯ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ನಡೆದಿದೆ.
ಕೃಷಿಕ ದಯಾನಂದ ಭಟ್ ಅವರ ಅಡಿಕೆ ಒಣಗಿಸುವ ಕೊಠಡಿಗೆ ಬಂದು ಅವಿತು ಕುಳಿತ ಚಿರತೆಯು ದಯಾನಂದ ಭಟ್ ಅವರ ಪತ್ನಿ ಮೇಲೆ ದಾಳಿ ನಡೆಸಿದ್ದು, ಮಹಿಳೆಗೆ ಪರಚಿದ ಗಾಯವಾಗಿದೆ.
ಊರಿನ ಸಾರ್ವಜನಿಕರು ಈ ಬಗ್ಗೆ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆಯವರು ಚಿರತೆಯನ್ನು ಹಿಡಿಯಲು ಬೋನ್ ಅಳವಡಿಸಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ