ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ವಿಭಿನ್ನ ನೆಲೆಗಳ ಚಂದ್ರಶೇಖರ ಪಾಟೀಲರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ . ಇವರು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾಗಿದ್ದರು.
ನ್ನಡ ನಾಡು-ನುಡಿ, ಸಂಸ್ಕೃತಿಯ ರಕ್ಷಣೆಗಾಗಿ ನಿರಂತರ ಹೋರಾಡುತ್ತಾ ಬಂದಿರುವ ಚಂಪಾರವರಿಗೆ ಬಂದಿರುವ ಪ್ರಶಸ್ತಿ ಗೌರವಗಳು ಹಲವಾರು. ಇವುಗಳಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ (1960, 74, 76), ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೆ.ವಿ. ಶಂಕರಗೌಡ ರಂಗಭೂಮಿ ಪ್ರಶಸ್ತಿ, ಸಂದೇಶ್ ಮಾಧ್ಯಮ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ ಮತ್ತು ಪಂಪ ಪ್ರಶಸ್ತಿ ಮುಂತಾದವುಗಳು
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ