ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರಿಗೆ ವಿದ್ಯುತ್ ತಗುಲಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ನಾಡ್ಪಾಲು ಗ್ರಾಮದ ಸೊಮೇಶ್ವರ ಎಂಬಲ್ಲಿ ನಡೆದಿದೆ.
ಮೃತರನ್ನು ಎಣ್ಣೆಹೊಳೆಯ ರವಿ ಪೂಜಾರಿ(38) ಎಂದು ಗುರುತಿಸಲಾಗಿದೆ.
ರವಿ ಪೂಜಾರಿ ದೈವದ ಗುಡಿಯ ಸೆಂಟ್ರಿಂಗ್ ಕೆಲಸವನ್ನು ಮಾಡುತ್ತಿದ್ದು, ಈ ಸಂಧರ್ಭದಲ್ಲಿ ಕಬ್ಬಿಣದ ಗುಜಿಯನ್ನು ಕೈಯಿಂದ ಹಿಡಿದು ರಭಸವಾಗಿ ಎಳೆದಾಗ ಅದು ನಿಯಂತ್ರಣ ತಪ್ಪಿಸಮೀಪದಲ್ಲಿದ್ದ ವಿದ್ಯುತ್ ಟ್ರಾನ್ಸ್‌ಫಾರಂಗೆ ತಾಗಿತ್ತೆನ್ನಲಾಗಿದೆ. ಇದರ ಪರಿಣಾಮ ಅದರಲ್ಲಿದ್ದ ವಿದ್ಯುತ್ ಕಬ್ಬಿಣದ ಗುಜಿಯ ಮೂಲಕ ರವಿ ಪೂಜಾರಿ ಮೈ ಮೇಲೆ ಹರಿಯಿತು. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡು ಕುಸಿದು ಬಿದ್ದ ಅವರು, ಹೆಬ್ರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ