ತಲೆನೋವಿಗೆ 18 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕಾರ್ಕಳದ ನೀರೆ ಎಂಬಲ್ಲಿ ನಡೆದಿದೆ.
ಕಾರ್ಕಳದ ನೀರೆ ಗ್ರಾಮದ ಶರಣ್ಯ ೧೮ ಮೃತಪಟ್ಟವರು.ಇವರಿಗೆ 12 ದಿನಗಳ ಹಿಂದೆ ತಲೆನೋವಿಗೆ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಜ.9 ರಂದು ಶರಣ್ಯ ಅವರಿಗೆ ಮತ್ತೆ ತಲೆನೋವು ಕಾಣಿಸಿಕೊಂಡಿತ್ತು. ಈ ವೇಳೆ ಅಸ್ವಸ್ಥಗೊಂಡಿದ್ದ ಶರಣ್ಯ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಕಾರ್ಕಳದ ಸರಕಾರಿ ಆಸ್ಪತ್ರೆಗೆ ಕರೆದು ಕೊಂಡು ಹೋಗಿದ್ದರು. ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ