Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಸಚಿವ ಸುನಿಲ್ ಕುಮಾರ್ ಹೇಳಿಕೆ11-1-2022

ಉಡುಪಿ: ಜಿಲ್ಲೆಯಲ್ಲಿ ದಿನಗಳು ಕಳೆದಂತೆ ಕೊರೊನಾ ಪ್ರಕರಣ ಹೆಚ್ಚುತ್ತಿರುವುದರಿಂದ ಶಾಲೆಗಳಲ್ಲಿ ಭೌತಿಕ ತರಗತಿ ನಡೆಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಸುದೀರ್ಘ‌ ಚರ್ಚೆ ನಡೆಸಲಾಗಿದೆ. 

ಇನ್ನು ಈ ಕುರಿತು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕೊರೊನಾ ಸಂಬಂಧ ಶೀಘ್ರದಲ್ಲೆ ನಡೆಯಲಿರುವ ಮುಂದಿನ ಸಭೆಯಲ್ಲಿ ಭೌತಿಕ ತರಗತಿ ನಡೆಸಬೇಕೊ / ಬೇಡವೋ ಈ ಬಗ್ಗೆ ನಿರ್ಧರಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮಹಾನಗರದಲ್ಲಿ ಕೊರೊನಾ ಹೆಚ್ಚಾದ ಹಿನ್ನೆಲೆಯಲ್ಲಿ 1ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗೆ ಬರುವುದನ್ನು ರದ್ದು ಮಾಡಲಾಗಿದೆ. 

ಇನ್ನು ಉಡುಪಿ ಜಿಲ್ಲೆಯಲ್ಲಿ ಈ ಸಂಬಂಧ ಯಾವುದೇ ಕ್ರಮ ಇನ್ನು ತೆಗೆದುಕೊಂಡಿಲ್ಲ. ಮುಂದಿನ ಸಭೆಯಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌ ಹೇಳಿದರು.

ಜಿಲ್ಲೆಯ ಸಚಿವರು ಹಾಗೂ ಶಾಸಕರೊಂದಿಗೆ ಈ ವಿಚಾರವಾಗಿ ಚರ್ಚೆ ನಡೆಸಿದ್ದೇವೆ. ಕೆಲವು ಶಾಲೆಗಳಲ್ಲಿ ಕೊರೊನಾ ಪ್ರಕರಣಗಳು ಕಂಡು ಬಂದಿವೆ. ಸ್ವಲ್ಪ ದಿನ ಕಾದು, ಶಾಲೆಗಳಲ್ಲಿ ಪ್ರಕರಣ ಜಾಸ್ತಿಯಾದರೆ ಮುಂದಿನ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ತೀರ್ಮಾನಿಸಿದ್ದೇವೆ. .

ಕೊರೊನಾ ಪ್ರಕರಣ ಪತ್ತೆಯಾಗಿರುವ ಶಾಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ, ಸ್ವತ್ಛತೆಯ ಜೊತೆಗೆ ಕಂಟೈನ್ಮೆಂಟ್‌ ವಲಯ ರಚಿಸುವ ಕಾರ್ಯವೂ ಆಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಮಾಹಿತಿ ನೀಡಿದ್ದಾರೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo