ವಿಟ್ಲ : ಸಾಲೆತ್ತೂರಿನಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಮಂಗಳವಾರದಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಮಂಗಲ್ಪಾಡಿ ನಿವಾಸಿ, ಪುತ್ತೂರಿನ ಫಾತಿಮಾ ಮ್ಯಾಚಿಂಗ್ ಸೆಂಟರ್ ನ ಮಾಲಕ ಅಹಮ್ಮದ್ ಮುಜ್ತಾಬ್ (28) ಹಾಗೂ ಮಂಜೇಶ್ವರ ತಾಲೂಕಿನ ಬಾಯಾರು ಪದವು ನಿವಾಸಿ ಮೊಯ್ದೀನ್ ಮನೀಶ್(19) ಎಂದು ಗುರುತಿಸಲಾಗಿದೆ.
ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ಸೋಂಕಲ್ ಅಗರ್ತಿಮೂಲೆ ಸಮೀಪದ ಉಮರುಲ್ ಭಾಷಿತ್ ಎಂ ಎಂಬವರ ಜತೆ ಜನವರಿ. 6 ರಂದು ನಡೆದಿತ್ತು.
ಅದೇ ದಿನ ರಾತ್ರಿ ಸಾಲೆತ್ತೂರಿನ ಮದುಮಗಳ ಮನೆಯಲ್ಲಿ ನಡೆದ ಔತಣ ಕೂಟದಲ್ಲಿ ಮದುಮಗ ಭಾಷಿತ್ ಕೊರಗಜ್ಜನ ಮಾದರಿಯ ವೇಷ ದರಿಸಿ ಕುಣಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಬಗ್ಗೆ ಹಿಂದೂ ಜಾಗರಣ ವೇದಿಕೆಯ ವತಿಯಿಂದ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಅದರಂತೆ ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ.
ಕೊರಗಜ್ಜನ ವೇಷ ಧರಿಸಿದ ಪ್ರಮುಖ ಆರೋಪಿ ಮದುಮಗ ಭಾಷಿತ್ ತಲೆಮರೆಸಿಕೊಂಡಿದ್ದಾನೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ