Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಸ್ವಾಮಿ ವಿವೇಕಾನಂದರು ನಮ್ಮ ಭಾರತೀಯ ಸಂಸ್ಕೃತಿಯನ್ನು ಜಗದುದ್ದಗಲಕ್ಕೆ ಪಸರಿಸಿದ ಮಾಹಾನ್ ಸಂತ- ವಿದ್ಯಾಭಾರತೀಯ ಪ್ರಾಂತ ಸಂಘಟನಾ ಕಾರ್ಯದರ್ಶಿಉಮೇಶ್ 12-1-2022

ಜನವರಿ 12- ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಜ್ಞಾನರತ್ನ ಎಜುಕೇಷನ್ ಹಾಗೂ ಚಾರಿಟೇಬಲ್ ಟ್ರಸ್ಟ್ ನಿಡ್ಡೋಡಿ ವತಿಯಿಂದ ಶ್ರೀ ದುರ್ಗಾದೇವಿ ಸಮೂಹ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆಯನ್ನು ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುವ ಮುಖಾಂತರ ದೀಪಪ್ರಜ್ವಲಿಸಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಹಾಗೂ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ಸಮಾರಂಭದಲ್ಲಿ ಉಪನ್ಯಾಸ ನೀಡಲು ವಿದ್ಯಾಭಾರತೀಯ ಪ್ರಾಂತ ಸಂಘಟನಾ ಕಾರ್ಯದರ್ಶಿ ಶ್ರೀ ಉಮೇಶ್ ಆಗಮಿಸಿದ್ದರು. ಇವರು ತಮ್ಮ ಉಪನ್ಯಾಸ ಮೂಲಕ ಮಕ್ಕಳಿಗೆ ಸ್ವಾಮಿ ವಿವೇಕಾನಂದರ ಜೀವನ ಹಾಗೂ ವಿವೇಕಾನಂದರು ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷ್ ರ ದಾಸ್ಯವನ್ನು ಅಂತ್ಯಗೊಳಿಸಲು ಭಾರತೀಯರನ್ನು ಸಂಘಟಿಸಲು ಶ್ರಮಿಸಿ ಅನೇಕ ಸ್ವಾತಂತ್ರ್ಯ ಹೋರಾಟಗಾರರ ಸೃಷ್ಟಿಗೆ ಕಾರಣೀಭೂತರಾಗಿದ್ದಾರೆ ಹಾಗೂ ಭಾರತದ ಹಿರಿಮೆಯನ್ನು ಜಗದುದ್ಧಲಕ್ಕೆ ಪಸರಿಸಿದ ವೀರ ಸನ್ಯಾಸಿಯೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಭಾಸ್ಕರ ದೇವಸ್ಯ ವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಕೆ. ರಾಘವೇಂದ್ರ ಭಟ್, ಪ್ರಾಂಶುಪಾಲರಾದ ಶ್ರೀಮತಿ ಅನುರಾಧ ಸಾಲ್ಯಾನ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಯಶ್ವಿತಾ ಉಪಸ್ಥಿತರಿದ್ದರು. ಶ್ರೀಮತಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo