ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆಯಂತೆ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾದರೆ ಆ ತರಗತಿ ಅಥವಾ ಆ ವಿಭಾಗವನ್ನು ಐದು ದಿನ ಬಂದ್ ಮಾಡಲಾಗುತ್ತದೆ. ಇಡೀ ಶಾಲೆಯನ್ನು ಬಂದ್ ಮಾಡುವ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದರು.
ಸರಕಾರದಿಂದ ಬಂದಿರುವ ನಿರ್ದೇಶನಗಳನ್ನು ಪಾಲನೆ ಮಾಡಲಾಗುತ್ತದೆ. ಜಿಲ್ಲೆಯ ತಜ್ಞರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿ ಗಳ ಜತೆ ಮಾತುಕತೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೂ ಕೆಲವು ನಿರ್ದೇಶನ ನೀಡಿದ್ದೇವೆ ಮತ್ತು ಅವರಿಂದ ವರದಿ ಪಡೆಯುತ್ತಿದ್ದೇವೆ ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ