Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಜನವರಿ 12ರಂದು ಕೂರ್ಮಾ ಬಳಗದಿಂದ "ಜಯೋಸ್ತುತೆ" ಸಾವರ್ಕರ್ ಕಾರ್ಯಕ್ರಮ10-1-2022

ಜನವರಿ ೧೨ ರಂದು ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ದೇಶದಾದ್ಯಂತ ಆಚರಿಸಲಾಗುತ್ತಿದೆ ಆ ಪ್ರಯುಕ್ತ, ಉಡುಪಿಯ ಕೂರ್ಮಾ ಬಳಗವು ಸ್ವಾತಂತ್ರ್ಯ ವೀರ ಸಾವರ್ಕರ್ ಕುರಿತ  "ಜಯೋಸ್ತುತೆ ಸಾವರ್ಕರ್" ಕಾರ್ಯಕ್ರಮ ಮತ್ತು ಅವರ  ಸಾಹಿತ್ಯಗಳ ಕುರಿತಾಗಿ ವಿಚಾರ ಗೋಷ್ಠಿ ಆಯೋಜಿಸಿದೆ.

ಈ ಬಗ್ಗೆ ಉಡುಪಿಯ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಕೂರ್ಮಾ ಬಳಗದ ಸಂಚಾಲಕ ಶ್ರೀಕಾಂತ್ ಶೆಟ್ಟಿ, ಜನವರಿ ೧೨ ರಂದು ಉಡುಪಿಯ ಪುರಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ವೀರ ಸಾವರ್ಕರ್ ಮೊಮ್ಮಗ ಮೃತ್ಯುಂಜಯ ಪ್ರಕಾಶನದ ಮುಖ್ಯಸ್ಥ, ಸಾತ್ಯಕಿ ಸಾವರ್ಕರ್, ಬಿ.ಜೆ.ಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸಾವರ್ಕರ್ ಅವರ ಕೃತಿಗಳ ಪ್ರದರ್ಶನ ಜೊತೆಗೆ ಮಾರಾಟ ಮೇಳ ಆಯೋಜಿಸಲಾಗಿದೆ. ಜೊತೆಗೆ ಸಾವರ್ಕರ್ ಸಾಹಿತ್ಯಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದ್ದಾರೆ.
ವರದಿ:-ಉಡುಪಿ ಫಸ್ಟ್



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo