Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಶ್ರೀಕೃಷ್ಣ ಮಠದಲ್ಲಿ ಮೂರು ತೇರು ಉತ್ಸವ15-1-2022

ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ನೇತೃತ್ವದಲ್ಲಿ ಮಕರ ಸಂಕ್ರಾಂತಿಯ ಹಿನ್ನೆಲೆಯಲ್ಲಿ ಬ್ರಹ್ಮರಥ ಸಹಿತ ಮೂರು ತೇರುಗಳ ಉತ್ಸವ ನಡೆಯಿತು.
ಮೂರು ರಥಗಳಲ್ಲಿ ಶ್ರೀಕೃಷ್ಣ, ಮುಖ್ಯಪ್ರಾಣ, ಅನಂತೇಶ್ವರ, ಚಂದ್ರಮೌಳೀಶ್ವರ ದೇವರ ಉತ್ಸವ ಮೂರ್ತಿಗಳನ್ನು ಇರಿಸಿ ಉತ್ಸವ ನಡೆಸಲಾಯಿತು.
ಮಧ್ವಸರೋವರದಲ್ಲಿ ತೆಪ್ಪೋತ್ಸವ ನಡೆದ ಬಳಿಕ ರಥೋತ್ಸವ ನಡೆಯಿತು. ವಿದ್ಯುದ್ದೀಪಗಳು ಮತ್ತು ಆಕರ್ಷಕ ಸುಡು ಮದ್ದುಗಳ ಪ್ರದರ್ಶನ ನಡೆಯಿತು.
ಅದಮಾರು, ಪೇಜಾವರ, ಕಾಣಿಯೂರು, ಸೋದೆ, ಪಲಿಮಾರು ಹಿರಿಯ, ಕಿರಿಯ, ಶೀರೂರು ಸ್ವಾಮೀಜಿಯವರು ಪಾಲ್ಗೊಂಡಿದ್ದರು.
ವರದಿ:-ಉಡುಪಿ ಫಸ್ಟ್


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo