ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಂದು ಪ್ರದರ್ಶಿಸಿಸಲಿರುವ ಸ್ಥಬ್ಧ ಚಿತ್ರ ಪ್ರದರ್ಶನದಿಂದ ಬ್ರಹ್ಮ ಶ್ರೀ ನಾರಾಯಣಗುರು ಅವರ ಸ್ಥಬ್ಧ ಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದೆ. ಈ ಬಗ್ಗೆ ಸದ್ಯ ಕೇಂದ್ರ ಸರ್ಕಾರದ ನಡೆಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಕುಮಾರಸ್ವಾಮಿ ಆಕ್ರೋಶ:-
ಕೇಂದ್ರ ಸರ್ಕಾರದ ಈ ನಡೆಯನ್ನು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಪರಮಪೂಜ್ಯರಾದ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ, ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ. ಆಯ್ಕೆ ಸಮಿತಿಯಲ್ಲಿ ಇಂಥ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ, ಕೂಡಲೇ ನಾರಾಯಣ ಗುರುಗಳ ಚಿತ್ರವಿರುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್ʼಗೆ ಸಮಿತಿಯು ಅಂಗೀಕಾರ ಮಾಡಬೇಕು. ಕೂಡಲೇ ಸಂಬಂಧಪಟ್ಟ ಕೇಂದ್ರದ ಸಚಿವಾಲಯ ಮತ್ತು ಅಧಿಕಾರಿಗಳು ಈ ಅಚಾತುರ್ಯವನ್ನು ಸರಿ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.
ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಟೀಕೆ:-
ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್, ಮಹಾತ್ಮಾಗಾಂಧಿ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರಿಂದ ಗೌರವಿಸಲ್ಪಟ್ಟ ಶ್ರೀ ನಾರಾಯಣ ಗುರುಗಳನ್ನು ಇಂದಿನ ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರ ಅಪಮಾನಿಸಿರುವುದು ಖಂಡನೀಯ ಎಂದು ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ವಿಧಾನಪರಿಷತ್ ಸದಸ್ಯರಾದ ಬಿ ಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ