ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರದ ನಡೆಯ ಬಗ್ಗೆ ಕಟುವಾಗಿ ಟೀಕಿಸಿದ್ದಾರೆ.
ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣಗುರು ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಣೆ ಹಿಂದೂ ಹೃದಯ ಸಾಮ್ರಾಟ್ ಎನಿಸಿಕೊಳ್ಳುವ ಪ್ರಧಾನಿ ಮೋದಿಯವರಿಗೆ ಇಂದು ಗಮನಕ್ಕೆ ಬಂದಿಲ್ಲವೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ.17-1-2022
#insult_to_narayanaguru ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,
ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಯಾವ ಕಾರಣಕ್ಕಾಗಿ ಅವಕಾಶ ನಿರಾಕರಿಸಲಾಗಿದೆ? , ನಾರಾಯಣ ಗುರುಗಳು ಹಿಂದೂ ಧರ್ಮಕ್ಕೆ ಸೇರಿದವರಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಶತಮಾನದ ಹಿಂದೆಯೇ ಅಸ್ಪೃಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ದ ಸಿಡಿದೆದ್ದು ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ನಾರಾಯಣ ಗುರುಗಳಿಗೆ ಅವಮಾನಿಸಿರುವ ಬಿಜೆಪಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ? ಎಂದು ಬರೆದುಕೊಂಡಿದ್ದಾರೆ.
ಹಿಂದೂ ಧರ್ಮದ ಸುಧಾರಕ
ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ
ಅವಕಾಶ ನಿರಾಕರಿಸಿ ಅವಮಾನಿಸಿರುವುದು 'ಹಿಂದು ಹೃದಯ ಸಾಮ್ರಾಟ' ಎಂದು ಕರೆಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ಇನ್ನೂ ಬಂದಿಲ್ಲವೇ? ಎಂದು ಟ್ವೀಟ್ ಮಾಡಿದ್ದಾರೆ.
ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರದ ಬಿಜೆಪಿ ಸರ್ಕಾರ ದೇಶದ ಕ್ಷಮೆ ಕೇಳಬೇಕು.
ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಪ್ರಾಧಾನ್ಯ ಕೊಟ್ಟು ಅವಕಾಶ ನೀಡಬೇಕು ಎಂದಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ