Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ನಾರಾಯಣ ಗುರು ಸ್ತಬ್ಧ ಚಿತ್ರಕ್ಕೆ ಕೇಂದ್ರ ಅಗೌರವ:-ಸೊರಕೆ ಖಂಡನೆ 17-1-2022

ಉಡುಪಿ: ಗಣರಾಜ್ಯೋತ್ಸವ ಪರೇಡಿನಲ್ಲಿ ಕೇರಳ ಸರಕಾರದ ನಾರಾಯಣ ಗುರುಗಳ ಸ್ತಬ್ದ ಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಬಗ್ಗೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಒಂದೇ ಜಾತಿ, ಒಂದೇ ಮತ ಎಂಬ ವಿಶ್ವ ಮಾನವ ಸಂದೇಶ ನೀಡಿದ , ನಾರಾಯಣಗುರು ಅವರ ಸ್ತಬ್ದ ಚಿತ್ರವನ್ನು ಕಡೆಗಣಿಸಿರುವುದು, ಅವರ ಬೋಧನೆಗಳನ್ನು ಕೇಂದ್ರ ಸರಕಾರ ಕಡೆಗಣಿಸಿದಂತಿದೆ ಎಂದರು, 

ಹಿಂದೂ ಧರ್ಮದಲ್ಲಿ ಜಾತಿ ಪದ್ಧತಿ ಬಲವಾಗಿ ಬೇರೂರಿದ್ದ ಸಮಯದಲ್ಲಿ ಸಮಾಜದ ಶೋಷಣೆಗೊಳಗಾದ ಜನರಿಗೆ ದೇವರ ಪಾರ್ಥನೆ ಮಾಡಲು ಹಾಗೂ ದೇವಸ್ಥಾನಕ್ಕೂ ಪ್ರವೇಶವಿಲ್ಲದ ಸಮಯದಲ್ಲಿ ಗುರೂಜಿ ಧ್ವನಿಯಾಗಿ ಆತ್ಮವಿಶ್ವಾಸ ತುಂಬಿದರು. 


ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯನ್ನು ಭಕ್ತಿಯಿಂದ ಆರಾಧನೆ ಮಾಡುವ ಬಹುಸಂಖ್ಯೆಯ ಹಿಂದುಳಿದ ವರ್ಗದವರ ಮನಸಿನ ಭಾವನೆಗೆ ಧಕ್ಕೆಯಾಗಿದೆ. ಇದೊಂದು ಗಂಭೀರ ವಿಷಯವಾಗಿದ್ದು ಸರಕಾರವು ನಾರಾಯಣ ಗುರುಗಳ ಸ್ತಬ್ದ ಚಿತ್ರಕ್ಕೆ ಅವಕಾಶ ಮಾಡಿಕೊಡುವುದರ ಮೂಲಕ ಅವರಿಗೆ ಗೌರವ ಸಲ್ಲಿಸಬೇಕೆಂದು ಸೊರಕೆ ಆಗ್ರಹಿಸಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo