Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಇಂದು - ನಾಳೆ ಸರಳವಾಗಿ ನಡೆಯಲಿದೆ ಕೃಷ್ಣಾಪುರ ಪರ್ಯಾಯೋತ್ಸವ 17-1-2022

 ಕೋವಿಡ್ ಹಿನ್ನೆಲೆಯಲ್ಲಿ ಉಡುಪಿಯ ಶ್ರೀಕೃಷ್ಣ ಮಠದ ಐತಿಹಾಸಿಕ ಪರ್ಯಾಯೋತ್ಸವವನ್ನು ಅತಿ ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಪರ್ಯಾಯೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೋವಿಡ್ 19 ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಸರ್ಕಾರದ ನಿರ್ಧಾರಕ್ಕೆ ಸಹಕರಿಸುವ ಉದ್ದೇಶದಿಂದ ಎಂಬ ಭಾವಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರ ತೀರ್ಥರ ಆಶಯದಂತೆ ಜ.17ರ ನಡುರಾತ್ರಿ ಹಾಗೂ 18ರ ನಸುಕಿನಲ್ಲಿ ನಡೆಯುವ ಪರ್ಯಾಯೋತ್ಸವ ಮೆರವಣಿಗೆ ಹಾಗೂ ರಾಜಾಂಗಣದಲ್ಲಿ ನಡೆಯಲಿರುವ ಪರ್ಯಾಯ ದರ್ಬಾರ್ ಸಭೆಯನ್ನು ತೀರಾ ಸಾಂಪ್ರದಾಯಿಕತೆಗೆ ಆದ್ಯತೆ ನೀಡಿ ಸರಳವಾಗಿ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಪರ್ಯಾಯ ಉತ್ಸವವನ್ನು ಟಿವಿ ವಾಹಿನಿಗಳಲ್ಲಿ ನೇರಪ್ರಸಾರ ಮಾಡಲಾಗುವುದು. ಭಕ್ತರು ಪ್ರತ್ಯಕ್ಷವಾಗಿ ಉತ್ಸವದಲ್ಲಿ ಭಾಗವಹಿಸದೆ ಆನ್‌ಲೈನ್‌ ಹಾಗೂ ಮಾಧ್ಯಮಗಳಲ್ಲಿ ವೀಕ್ಷಿಸುವ ಮೂಲಕ ಸಹಕರಿಸಬೇಕು ಎಂದು ಸಮಿತಿ ಮನವಿ ಮಾಡಿದೆ.

ಪರ್ಯಾಯೋತ್ಸವ ಮೆರವಣಿಗೆಯಲ್ಲಿ ಉತ್ಸವ ಸಮಿತಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಜಾನಪದ ತಂಡಗಳ ಪ್ರದರ್ಶನವನ್ನು ರದ್ದುಪಡಿಸಲಾಗಿದೆ. ಕೆಲವು ಟ್ಯಾಬ್ಲೋಗಳನ್ನು ಕೂಡ ಭಾಗಶಃ ರದ್ದು ಮಾಡಲಾಗಿದೆ. ಅಷ್ಟ ಮಠಾಧೀಶರು ಕುಳಿತುಕೊಳ್ಳುವ ಮೇನೆಯನ್ನು ಹೊತ್ತ ವಾಹನಗಳು, ವಾದ್ಯ, ಚಂಡೆ, ಡೋಲು, ಬಿರುದಾವಳಿ ಹಾಗೂ ಪೌರಾಣಿಕ ದೃಶ್ಯಾವಳಿಗಳನ್ನೊಳಗೊಂಡ ಕೆಲವು ಟ್ಯಾಬ್ಲೋಗಳು ಮಾತ್ರ ಮೆರಣಿಗೆಯಲ್ಲಿ ಇರುತ್ತವೆ. ಪರ್ಯಾಯ ದರ್ಬಾರ್ ಸಭೆಯಲ್ಲೂ ಸೀಮಿತ ಸಂಖ್ಯೆಯ ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಮಿತಿ ತಿಳಿಸಿದೆ.
ಪರ್ಯಾಯದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಎರಡು ಡೋಸ್‌ ಕೋವಿಡ್ ಲಸಿಕೆಗಳನ್ನು ಪಡೆದಿರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ ಅಂತರ ಕಾಪಾಡಿಕೊಕೊಳ್ಳಬೇಕು. ಸಮಿತಿಯು ಜಿಲ್ಲಾಡಳಿತದೊಂದಿಗೆ ಸಂಪೂರ್ಣ ಸಹಕರಿಸಲಿದ್ದು ಜನತೆಯೂ ಸಹಕರಿಸಬೇಕು ಎಂದು ಶಾಸಕರ ರಘುಪತಿ ಭಟ್‌ ಮನವಿ ಮಾಡಿದ್ದಾರೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo