Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟು ಅನಾವಶ್ಯಕ ವಿವಾದ ಸೃಷ್ಟಿ ಸರಿಯಲ್ಲ: ಸಚಿವ ವಿ. ಸುನಿಲ್ ಕುಮಾರ್ .18-1-2022

ಗಣರಾಜ್ಯೋತ್ಸವದ ಹೆಸರಿನಲ್ಲಿ ಕೇರಳ ರಾಜ್ಯವು ಶ್ರೀ ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು ಅನಾವಶ್ಯಕ ವಿವಾದ ಸೃಷ್ಟಿಸುತ್ತಿರುವುದು ಸರಿಯಲ್ಲ ಎಂದು ಸಚಿವ ಸುನಿಲ್ ಕುಮಾರ್ ಕಾರ್ಕಳ ಹೇಳಿಕೆ ನೀಡಿದ್ದಾರೆ.

 ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಪ್ರತೀ ವರ್ಷ ಜನವರಿ 26 ರ ಗಣರಾಜ್ಯೋತ್ಸವದಂದು ಘನವೆತ್ತ ಭಾರತ ಸರ್ಕಾರದಿಂದ ಪ್ರತೀ ವರ್ಷ ಗಣರಾಜ್ಯೋತ್ಸವದ ಆರಂಭದಿಂದ ಈವರೆಗೆ ತನ್ನದೇ ಆದಂತಹ ನಿಲುವನ್ನು ಇಟ್ಟುಕೊಂಡು ಪೇರೆಡ್ ನಡೆಯುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ . ಒಟ್ಟು ಈವರೆಗೆ ನಡೆದುಬಂದ ಪದ್ಧತಿಯಂತೆ ದೇಶದಲ್ಲಿರುವ ಒಟ್ಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ 36 ರಾಜ್ಯಗಳಂದು ಪರಿಗಣಿಸಿ ಪ್ರತಿ ರಾಜ್ಯವು ಗಣರಾಜ್ಯೋತ್ಸವ ನಿಮಿತ್ತ ಸ್ತಬ್ಧಚಿತ್ರಗಳನ್ನು ಗಣರಾಜ್ಯೋತ್ಸವದ ಪ್ರದರ್ಶನಕ್ಕೆ ಕಳುಹಿಸುವ ಪದ್ಧತಿ ಇತ್ತು.

ಆದರೆ ಪ್ರತಿ ವರ್ಷ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಹಿಂದೆ 12 ರಾಜ್ಯಗಳ ಸ್ತಬ್ಧ ಚಿತ್ರಗಳನ್ನು ಮಾತ್ರ ಪರಿಗಣಿಸಲಾಗುತ್ತಿದೆ . ಅಂದರೆ 3 ವರ್ಷಕ್ಕೊಮ್ಮೆ ಪ್ರತಿ ರಾಜ್ಯಗಳಿಗೆ ಭಾಗವಹಿಸುವ ಅವಕಾಶವಿದೆ . 

 36 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಇರುವ ನಮ್ಮ ದೇಶದಲ್ಲಿ ಪ್ರತಿ ರಾಜ್ಯವೂ ಪ್ರತಿವರ್ಷ ಪೆರೆಡ್‌ನಲ್ಲಿ ಭಾಗವಹಿಸುವ ಅವಕಾಶವನ್ನು ಹೊಂದಿದೆ. ಇದು ನಮ್ಮ ದೇಶದ ಗಣರಾಜ್ಯೋತ್ಸವ ಆರಂಭವಾದಾಗಿನಿಂದ ನಡೆದುಬಂದ ಸಂಪ್ರದಾಯ ಮತ್ತು ನಿಯಾಮಾವಳಿ ಆಗಿರುತ್ತದೆ . ಈ ಸಂಪ್ರದಾಯ 2018 ಮತ್ತು 2021 ರಲ್ಲಿ ಕೇರಳ ರಾಜ್ಯವು ತನ್ನ ಶಬ್ದ ಚಿತ್ರಗಳೊಂದಿಗೆ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿತ್ತು .  

ಈ ಪುನರಾವರ್ತಿತ ಕಳೆದ ವರ್ಷಗಳಲ್ಲಿ ಭಾಗವಹಿಸಿದ ರಾಜ್ಯಗಳನ್ನು ಬಿಟ್ಟು ಉಳಿದ 12 ರಾಜ್ಯಗಳಲ್ಲಿ ಈ ವರ್ಷ ಭಾಗವಹಿಸುವ ಅವಕಾಶವಿದೆ ವಿನಹ ಕಳೆದ ವರ್ಷ 2021 ರಲ್ಲಿ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ ಕೇರಳ ರಾಜ್ಯಕ್ಕೆ ಈ ವರ್ಷ ನಿಯಾಮವಳಿಯಂತೆ ಅವಕಾಶವಿದೆ . ಆದರೆ ಈ ನಿಯಮಾವಳಿ ತಿಳಿದಿದ್ದರೂ ಕೂಡ ಕೇರಳ ರಾಜ್ಯವು ನಾರಾಯಣ ಗುರುಗಳ ವಿಚಾರವನ್ನು ಮುಂದಿಟ್ಟುಕೊಂಡು ಅನಾವಶ್ಯಕ ವಿವಾದವನ್ನು ಹುಟ್ಟು ಹಾಕುತ್ತಿದೆ ಎಂದು ಸಚಿವ ಸುನಿಲ್ ಕುಮಾರ್ ಮಾಧ್ಯಮ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ವರದಿ:-ಉಡುಪಿ ಫಸ್ಟ್.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo