ಶ್ರೀ ಕ್ಷೇತ್ರ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಸಂಕ್ರಾಂತಿ ಮಹೋತ್ಸವಕ್ಕೆ ಎರಡು ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ದೇವಾಲಯದ ಆಡಳಿತ ಮಂಡಳಿ 14-01-2022 ರಂದು ಕೋವಿಡ್ ಕಾರಣದಿಂದ ಸಾಂಪ್ರದಾಯದಂತೆ ಸರಳವಾಗಿ ಮಕರ ಸಂಕ್ರಮಣ ಉತ್ಸವ ನಡೆಸಲಾಗುವುದು, ಭಕ್ತಾದಿಗಳು ಕಡ್ಡಾಯವಾಗಿ 2ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿರಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಿದವರಿಗೆ ಮಾತ್ರ ಬೆಳಗ್ಗೆ 8:30ರಿಂದ ಸಂಜೆ 6 ಗಂಟೆಯವರೆಗೆ ಪ್ರವೇಶ ವಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಇನ್ನುಳಿದಂತೆ ಗೆಂಡ ಸೇವೆಗೆ ಸಾರ್ವಜನಿಕರಿಗೆ ಅವಕಾಶವಿರುವುದಿಲ್ಲ, ಮತ್ತು 15 ಮತ್ತು 16ರಂದು ವಾರಾಂತ್ಯ ಕರ್ಫ್ಯೂ ಇದ್ದಲ್ಲಿ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗುವುದು, ಉಳಿದಂತೆ ಯಾವುದೇ ಸೇವೆಗೆ ಅವಕಾಶವಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ