ಕೊರೋನಾ ತಡೆಗೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಮಧ್ಯಾಹ್ನದ ವೇಳೆಗೆ ಹೊಸ ಮಾರ್ಗಸೂಚಿ ಜಾರಿಯಾಗುವ ಸಾಧ್ಯತೆಯಿದೆ.
ವೀಕೆಂಡ್ ಕರ್ಫ್ಯೂ ಕೈಬಿಡಬೇಕೆಂಬ ಒತ್ತಾಯ ತೀವ್ರವಾಗಿರುವ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಜನಸಾಮಾನ್ಯರು ಭಯಪಡುವ ಅವಶ್ಯಕತೆ ಇಲ್ಲವೆಂದು ಗೃಹಸಚಿವರು ಹೇಳಿದ್ದಾರೆ. ಇಂದಿನಿಂದ ವೀಕೆಂಡ್ ಕರ್ಫ್ಯೂ ಇರುವುದಿಲ್ಲವೆಂದು ಹೇಳಲಾಗಿದ್ದು, ಸಿಎಂ ನಡೆಸುವ ಸಭೆಯತ್ತ ಎಲ್ಲರ ಚಿತ್ತ ನೆಟ್ಟಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ