ವಿನಯ ಕುಮಾರ್ ಸೊರಕೆ, ಗೋಪಾಲ ಪೂಜಾರಿ, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸೇರಿದಂತೆ ಒಟ್ಟು 22 ಮಂದಿ ಕಾಂಗ್ರೆಸ್ ಮುಖಂಡರು ವಿರುದ್ಧ ಪ್ರಕರಣ ದಾಖಲಾಗಿದೆ.
ಸಕ್ಷಮ ಪ್ರಾಧಿಕಾರದಿಂದ ಯಾವುದೇ ಅನುಮತಿಯನ್ನು ಪಡೆದುಕೊಳ್ಳದೇ ನಿಯಮಗಳನ್ನು ಪಾಲಿಸದೆ ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ್ದಾರೆ. ನಂತರ ಜಿಲ್ಲಾಧಿಕಾರಿ ಕಚೇರಿ ಬಳಿ ಗುಂಪುಗೂಡಿ ಭಾಷಣ ನಡೆಸಿ ಕೋವಿಡ್ ನಿಯಮಾವಳಿಗಳನ್ನು ಮತ್ತು ಕೋವಿಡ್ -19 ತಡೆಯಲು ಸರಕಾರ ಹೊರಡಿಸಿ ರುವ ಆದೇಶವನ್ನು ಉಲ್ಲಂಘಿಸಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವ ಇರುವ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಯಶವಂತ್ ಪ್ರಭು ದೂರಿನಲ್ಲಿ ತಿಳಿಸಿದ್ದಾರೆ.
ಹೀಗಾಗಿ ಕಾಂಗ್ರೆಸ್ ನಾಯಕರು ವಿರುದ್ಧ ವಿರುದ್ಧ ಕಲಂ 188, 269 ಜೊತೆಗೆ 149 ಐಪಿಸಿ ಹಾಗೂ ಕಲಂ 5(1), 5(4) ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಯಕ್ಟ್‌ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ