ಉಡುಪಿ ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನು ಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ಅಧಿಕಾರಿಗಳು ಉಡುಪಿ ನಗರ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳಿಗೆ ಮತ್ತು ಬಾರ್ & ರೆಸ್ಟೋರೆಂಟಿಗೆ ದಿಢೀರ್ ದಾಳಿ ನಡೆಸಿದ ಘಟನೆ ನಡೆದಿದೆ. ಇದೇ ಸಂದರ್ಭದಲ್ಲಿ ಅಂಗಡಿಗಳಲ್ಲಿ ಅಳವಡಿಸಲಾಗಿದ್ದ ತಂಬಾಕು ಉತ್ಪನ್ನಗಳ ಜಾಹಿರಾತು ಫಲಕಗಳನ್ನು ತೆಗೆಯಲಾಯಿತು.
ಈ ವೇಳೆ ತಂಬಾಕು ಮಾರಾಟಗಾರರಿಗೆ 2450ರೂಪಾಯಿ ದಂಡವನ್ನು ಸಹ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಉಡುಪಿ ತಾಲೂಕು ಆರೋಗ್ಯಾಧಿಕಾರಿಯಾದ ಡಾ. ವಾಸುದೇವ್, ದೇವಪ್ಪ ಪಟಗಾರ್, ಉಡುಪಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಲಾ, ರಾಷ್ಟ್ರೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ ಜಿಲ್ಲಾ ಸಾಮಾಜಿಕ ಕಾರ್ಯಕರ್ತರಾದ ಶೈಲಾ ಶಾಮನೂರು, ಉಡುಪಿ ಪೊಲೀಸ್ ಠಾಣಾ ಸಿಬ್ಬಂದಿ ಸಿದ್ಧಪ್ಪ ತಲವಾಯಿ ಮತ್ತು ಹನುಮಂತ ಪೂಜಾರಿ, ವಾಹನ ಚಾಲಕರಾದ ಬಾಲು ಹಾಗೂ ಸಂತೋಷ್ ಹಾಜರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ