Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಬಂಟ್ವಾಳ:-ಅಕ್ರಮ ದನ ಸಾಗಾಟ ಪಿಕಪ್ ವಾಹನ ವಶಕ್ಕೆ 23-1-2022

ಬಂಟ್ವಾಳ : ಅಕ್ರಮವಾಗಿ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಹಿಂಸಾತ್ಮಕ ರೀತಿಯಲ್ಲಿ ದನ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ ದನ ವನ್ನು ವಶಕ್ಕೆ ಪಡೆದುಕೊಂಡ ಘಟನೆ ಶನಿವಾರ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಎಸ್ ಐ ಹರೀಶ್ ನೇತ್ರತ್ವದ ತಂಡ ಕಾರ್ಯಾಚರಣೆ ನಡೆಸಿ, ಇರಾ ಶಾಲಾ ಮೈದಾನದಲ್ಲಿ ವಾಹನ ಸಹಿತ ದನ ವನ್ನು ವಶಕ್ಕೆ ಪಡೆಡಿದ್ದಾರೆ.

ಈ ಕುರಿತು ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದಾಗ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. 

ಪಿಕಪ್ ವಾಹನದಲ್ಲಿ ದನವೊಂದನ್ನು ಹಿಂಸಾತ್ಮಕ ರೀತಿಯಲ್ಲಿ ಕೈ ಕಾಲು ಕಟ್ಟಿ ಹಾಕಲಾಗಿತ್ತು. 

ಸ್ಥಳಿಯರು ದನವನ್ನು ಮಾಂಸಕ್ಕಾಗಿ ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo