Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ:-ಕುಮಾರಸ್ವಾಮಿ ವಾಗ್ದಾಳಿ23-1-2022

ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ.. ನೀವಾ ಜೆಡಿಎಸ್‌ ಬಗ್ಗೆ ಮಾತನಾಡುವುದು? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೋರ್ವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ತುಮಕೂರಿನಿಂದ ಜೆಡಿಎಸ್‌ʼನ್ನು ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್‌ʼನ ಪಿತ್ರಾರ್ಜಿತ ಆಸ್ತಿಯಾ? ಚಾಮುಂಡೇಶ್ವರಿ ಕ್ಷೇತ್ರದಿಂದ ನಿಮ್ಮನ್ನು ಜನರು ಓಡಿಸಿದ್ದು ಮರೆತುಬಿಟ್ಟಿರಾ? ಈ ಸಲ ಬಾದಾಮಿ ಕ್ಷೇತ್ರದಿಂದಲೂ ಓಡಬೇಕಾಗುತ್ತದೆ, ಕಾಯಿರಿ ಎಂದಿದ್ದಾರೆ.

ಪ್ರತಿಯೊಂದಕ್ಕೂ ಈ ಸರಕಾರಕ್ಕೆ ಜೆಡಿಎಸ್‌ ಬೆಂಬಲ ನೀಡುತ್ತಿದೆ ಎನ್ನುವ ನಿಮ್ಮ ʼಸುಳ್ಳು ನಾಲಗೆʼ; ಅದೇ ಸರಕಾರ ಬರಲು ಮೂಲ ಕಾರಣರಾದ ʼಸಿದ್ದಪುರುಷʼ ಯಾರು ಎನ್ನುವುದನ್ನು ಹೇಳಲಿಲ್ಲವೇ? ಪಕ್ಷದ್ರೋಹ ತಾಯಿಗೆ ಮಾಡುವ ದ್ರೋಹಕ್ಕೆ ಸಮಾನ. ನಿಮ್ಮ ದ್ರೋಹ ಮುಚ್ಚಿಟ್ಟುಕೊಳ್ಳಲು ಜೆಡಿಎಸ್‌ ಜಪವಾ ಸಿದ್ದರಾಮಯ್ಯ? 

ಅಕ್ಕಪಕ್ಕದವರ ತಟ್ಟೆಯಲ್ಲಿರುವುದನ್ನು ಎಗರಿಸುವುದು ಸಿದ್ಧಾಂತವೇ? ʼಆಪರೇಷನ್‌ ಹಸ್ತʼವೂ ಸಿದ್ಧಾಂತವೇ? ಆಶ್ರಯ ಕೊಟ್ಟ ಪಕ್ಷವನ್ನು, ಅಲ್ಲಿನ ಮೂಲನಿವಾಸಿಗಳನ್ನು ಮುಗಿಸುವುದೇ ಸಿದ್ಧಾಂತವೇ?
ನೀವು ಜೆಡಿಎಸ್‌ ಸಿದ್ಧಾಂತದ ಬಗ್ಗೆ ಮಾತನಾಡುತ್ತೀರಿ? ನಾಚಿಕೆಯಾಗಬೇಕು ನಿಮಗೆ. 

ಸುಳ್ಳು ನಿಮ್ಮ ರಾಜಕೀಯದ ಅಡಿಪಾಯ. ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ಸುಳ್ಳೇ ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ.
#ವಿನಾಶಕಾಲೇ ವಿಪರೀತ ಬುದ್ಧಿ ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಟ್ವೀಟ್ ಮಾಡಿದ್ದಾರೆ.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo