Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಐ.ಪಿ.ಎಲ್. ಮೆಗಾ ಹರಾಜಿಗೆ ಹೆಸರು ನೋಂದಾಯಿಸಿದ ಎಸ್.ಶ್ರೀಶಾಂತ್23-1-2022

ಭಾರತದ ಮಾಜಿ ಬೌಲರ್ ಕೇರಳದ ವೇಗಿ ಎಸ್.ಶ್ರೀಶಾಂತ್ 2022ರ ಐಪಿಎಲ್ ಮೆಗಾ ಹರಾಜಿಗೆ ತಮ್ಮ ಹೆಸರನ್ನು ನೋಂದಾಣಿ ಮಾಡಿಕೊಂಡಿದ್ದಾರೆ.

ಐ.ಪಿ.ಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಲುಕಿ 7 ವರ್ಷಗಳ ನಿಷೇಧದ ಬಳಿಕ ಕಳೆದ ವರ್ಷ ಐಪಿಎಲ್ ಹರಾಜಿನಲ್ಲಿ ತಮ್ಮ ಹೆಸರನ್ನು ಶ್ರೀಶಾಂತ್ ನೋಂದಾಣಿ ಮಾಡಿಕೊಂಡಿದ್ದರು. ಆದರೆ ಅಂತಿಮ ಪಟ್ಟಿಯಲ್ಲಿ ಶ್ರೀಶಾಂತ್ ಅವರ ಹೆಸರು ಇರಲಿಲ್ಲ. ಇದೀಗ ಈ ಬಾರಿ ಮತ್ತೆ 50 ಲಕ್ಷ ರೂ. ಮೂಲಬೆಲೆಗೆ ಶ್ರೀಶಾಂತ್ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. 

ಈ ಹಿಂದಿನ ಐ.ಪಿ.ಎಲ್‌ನಲ್ಲಿ ರಾಜಸ್ಥಾನ ರಾಯಲ್, ಕೊಚ್ಚಿ ಟಸ್ಕರ್ಸ್ ಕೇರಳ ಮತ್ತು ಕಿಂಗ್ಸ್ 11 ಪಂಜಾಬ್ ಪರ ಆಡಿದ್ದರು. ಐಪಿಎಲ್‍ನಲ್ಲಿ ಒಟ್ಟು 44 ಪಂದ್ಯವಾಡಿರುವ ಶ್ರೀ 44 ವಿಕೆಟ್ ಪಡೆದು ಮಿಂಚಿದ್ದಾರೆ.




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo