ಇನ್ನು ಮೃತರನ್ನು ಬೈಕ್ ಸವಾರ ಉಚ್ಚಿಲ ಪೊಲ್ಯ ನಿವಾಸಿ ಗಣೇಶ್ ಆಚಾರ್ಯ (41) ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳೂರು ಕಡೆಯಿಂದ ಉಡುಪಿಯತ್ತ ಚಲಿಸುತ್ತಿದ್ದ ಲಾರಿ ಉಡುಪಿ ಕಡೆಯಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ