ಕಳೆದ ಶುಕ್ರವಾರದಂದು ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರು ಶವವಾಗಿ ಇಂದು ಪತ್ತೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರು ಶುಕ್ರವಾರ ಸಂಜೆ ಮನೆಯಿಂದ ತೆರಳಿದ್ದಂತವರು, ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಬಳಿಯಲ್ಲಿ ಕಾರು ನಿಲ್ಲಿಸಿ, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದರು
ಅವರಿಗಾಗಿ ಕಳೆದ ಮೂರು ದಿನಗಳಿಂದ ಹುಡುಕಾಟ ನಡೆಸಲಾಗುತ್ತಿತ್ತು. ಇಂದು ಬೆಳಿಗ್ಗೆ ಅವರ ಶವ ಪಟಗುಪ್ಪೆ ಹೊಳೆಯ ಸಮೀಪದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಸುಮಾರು 20 ವರ್ಷಗಳಿಂದ ಪ್ರಕಾಶ್ ಬಸ್ ಟ್ರಾವೆಲ್ಸ್ ನಡೆಸುತ್ತಿದ್ದರು. ಕೊರೋನಾ ಲಾಕ್‌ಡೌನ್ ಸಂಧರ್ಭದಲ್ಲಿ ಸಂಸ್ಥೆ ನಷ್ಟ ಅನುಭವಿಸುತ್ತಿತ್ತು ಎನ್ನಲಾಗಿದೆ. ಈ ನಷ್ಟದಿಂದ ಬೇಸತ್ತು ಮಾಲೀಕ ಪ್ರಕಾಶ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ