ಇಂದು ದಿನದಲ್ಲಿ 90 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಪಾಸಿಟಿವ್ ಬಂದ 379 ಮಂದಿಯಲ್ಲಿ 200 ಮಂದಿ ಪುರುಷರಾದರೆ 179 ಮಂದಿ ಮಹಿಳೆಯರು.
ಪಾಸಿಟಿವ್ ಬಂದವರಲ್ಲಿ 282 ಮಂದಿ ಉಡುಪಿ ತಾಲೂಕಿಗೆ ಸೇರಿದವರಾದರೆ ಕುಂದಾಪುರ ತಾಲೂಕಿನ 46 ಮಂದಿ ಹಾಗೂ ಕಾರ್ಕಳ ತಾಲೂಕಿನ 45 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಅಲ್ಲದೇ ಹೊರಜಿಲ್ಲೆಗಳಿಂದ ಬಂದ ಆರು ಮಂದಿಯಲ್ಲೂ ಸೋಂಕು ಪತ್ತೆಯಾಗಿದೆ. ಜಿಲ್ಲೆಯ ಸದ್ಯದ ಪಾಸಿಟಿವಿಟಿ ಪ್ರಮಾಣ ಶೇ.5.57ರಲ್ಲಿದೆ.
ಇಂದು ಪಾಸಿಟಿವ್ ಬಂದ 379 ಮಂದಿಯಲ್ಲಿ 20 ಮಂದಿಯನ್ನು ಕೋವಿಡ್ ಕೇರ್‌ಸೆಂಟರ್‌ಗೂ, ನಾಲ್ವರನ್ನು ಕೋವಿಡ್ ಆಸ್ಪತ್ರೆಗೂ, ಏಳು ಮಂದಿ ಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತಿದ್ದು, ಉಳಿದ 348 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಸಹ ಎಂದಿನಂತೆ ಜಿಲ್ಲೆಯಲ್ಲಿ ಯಾರು ಕೂಡ ಕರೋನಕ್ಕೆ ಬಲಿಯಾದವರು ಇರುವುದಿಲ್ಲ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ