Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಚ್ಚರಿಕೆ..6-1-2022

ಕೋವಿಡ್ ಮಾರ್ಗ ಸೂಚಿಗಳನ್ನು ಪಾಲಿಸುವಂತೆ ಹಾಗೂ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ಅಂಗಡಿ ಮುಂಗಟ್ಟುಗಳಿಗೆ ತೆರಳಿ ಎಚ್ಚರಿಕೆ ನೀಡಿದರು.

ಮಣಿಪಾಲ್ ನ ಟೈಗರ್ ಸರ್ಕಲ್ , ಬಸ್ ಸ್ಟಾಂಡ್‌, ರಸ್ತೆ ಬದಿಯ ಅಂಗಡಿ ಮುಂಗಟ್ಟು ಸೇರಿದಂತೆ ಮಾಲ್ ಗಳಿಗೆ ಭೇಟಿ ನೀಡಿ , ಅಲ್ಲಿನ ವ್ಯಾಪಾರಿಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಎಚ್ಚರಿಕೆ ನೀಡುವುದರ ಜೊತೆಗೆ , ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟು ಮಾಡುವವರಿಗೆ ದಂಢ ವಿಧಿಸಲು ನಗರಸಭಾ ಸಿಬ್ಬಂದಿ ವರ್ಗದವರಿಗೆ ಸೂಚನೆ ನೀಡಿದರು.
ಅಂಗಡಿ ಮಾಲೀಕರುಗಳು ತಮ್ಮ ಅಂಗಡಿ ಮುಂಭಾಗ ಗ್ರಾಹಕರು ಸಾಮಾಜಿಕ ಅಂತರ ಕಾಯ್ದಕೊಳ್ಳುವಂತೆ ಸೂಕ್ತ ಮಾರ್ಕಿಂಗ್ ಮಾಡುವುದರೊಂದಿಗೆ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನಿಗಾ ವಹಿಸಬೇಕು , ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂಬ ನಾಮಫಲಕಗಳನ್ನು ಅಳವಡಿಸಬೇಕು, ಒಂದೊಮ್ಮೆ ಕೋವಿಡ್ ಮಾರ್ಗಸೂಚಿ ಪಾಲಿಸಿದ್ದಿದ್ದಲ್ಲಿ ಅವರೊಂದಿಗೆ ವ್ಯವಹರಿಸಲು ಮುಂದಾಗಬಾರದು ಎಂದು ಸೂಚಿಸಲಾಯಿತು. ಮಾಲ್ ಗಳ ಪ್ರವೇಶ ದ್ವಾರದ ಬಳಿ ಥರ್ಮಲ್ ಸ್ಕ್ಯಾನಿಂಗ್ ಮಾಡುವುದರ ಜೊತೆಗೆ ಪ್ರತಿಯೊಬ್ಬರೂ ಮಾಸ್ಕ್ ಧರಿಸಿದ್ದರೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕು, ಮಾಲ್ ಒಳಗೆ ಜನದಟ್ಟಣೆಯಾಗದಂತೆ ಎಚ್ಚರ ವಹಿಸಿ ಶೇ. 50 ಕ್ಕಿಂತ ಕಡಿಮೆ ಜನಸಾಂದ್ರತೆ ಇರುವಂತೆ ಕ್ರಮ ವಹಿಸುವಂತೆ ಹಾಗೂ ಒಂದೊಮ್ಮೆ ಇವುಗಳನ್ನು ಉಲ್ಲಂಘಿಸಿದಲ್ಲಿ ಮಾಲ್ ಗಳನ್ನು ಮುಚ್ಚುವಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಯಿತು. 

    ಸಾರ್ವಜನಿಕ ಸ್ಥಳದಲ್ಲಿ ಪ್ರತಿಯೊಬ್ಬರೂ ಕೋವಿಡ್ ನ ಸರಳ ಮಾರ್ಗಸೂಚಿಗಳಾದ ಸಾಮಾಜಿಕ ಅಂತರ ಕಾಪಾಡುವುದು, ಮುಖಗವಸು ಧರಿಸುವುದು, ಸ್ವಚ್ಚತೆಗೆ ಆದ್ಯತೆ ನೀಡುವುದು ಸೇರಿದಂತೆ ಮತ್ತಿತರ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು, ತಪ್ಪಿದಲ್ಲಿ ಅಂತಹವರಿಂದ ನಿರ್ದಾಕ್ಷಿಣ್ಯವಾಗಿ ದಂಡ ವಸೂಲಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo