ಉಡುಪಿ:-ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಹೀಗಾಗಿ ಜಿಲ್ಲೆಯ ಎಲ್ಲಾ ಬೀಚ್‌ಗಳಿಗೆ ಜನರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಕೋವಿಡ್ ತಡೆಯುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬೀಚ್‌ಗೆ ಪ್ರವಾಸಿಗರನ್ನು ತಡೆಯಲು, ಸಂಜೆ 7ಗಂಟೆಯ ನಂತರ ಬೀಚ್ ಪ್ರವೇಶ ನಿಷೇಧ ಮಾಡುತ್ತೇವೆ ಎಂದಿದ್ದಾರೆ.ಸಂಜೆ 6:30ರ ನಂತರ ಬೀಚ್ ಸುತ್ತಮುತ್ತ ಪೊಲೀಸರನ್ನು ನೇಮಿಸಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗುವುದು ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ