ಕಾರ್ಕಳ ನಗರ ಪೊಲೀಸ್ ಠಾಣೆಯ ನೂತನ ಎಸ್.ಐ.ಆಗಿ ಪ್ರಸನ್ನ ಎಂ.ಎಸ್ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಸನ್ನ ಎಂ.ಎಸ್. ಅವರು ಕಾರ್ಕಳ ನಗರ ಪೊಲೀಸ್ ಠಾಣೆಯ ನೂತನ ಎಸ್‌ಐ ಆಗಿ ಅಧಿಕಾರ ವಹಿಸಲಿರುವರು.
ಮೂಲತಃ ಶಿವಮೊಗ್ಗದವರಾದ ಪ್ರಸನ್ನ ಅವರು 6 ವರ್ಷಗಳ ಹಿಂದೆ ಇಲಾಖೆಗೆ ಸೇರ್ಪಡೆಗೊಂಡಿದ್ದು, 4 ವರ್ಷ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ