Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಮಸೀದಿ ಒಳಗೆ ಮಹಿಳೆಯರಿಗೆ ಪ್ರವೇಶ ನೀಡಲಿ:- ಸಚಿವ ಸುನಿಲ್ ಕುಮಾರ್ ಹೇಳಿಕೆ 6-2-2022

ಮಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಇದೊಂದು ವ್ಯವಸ್ಥಿತ ಷಡ್ಯಂತ್ರ. ಶಾಲೆಯ ಕಾಂಪೌಂಡ್ ತನಕ ಹಿಜಾಬ್, ಬುರ್ಖಾ ಹಾಕಿಕೊಂಡು ಬರಲಿ. ಆದರೆ ಶಾಲೆ ಒಳಗೆ ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು.

ಕರ್ನಾಟಕ ರಾಜ್ಯದ ಶಾಲೆಯಲ್ಲಿ ವಸ್ತ್ರ ಸಂಹಿತೆ ಸಾಂಪ್ರದಾಯಿಕವಾಗಿ ಬಂದಿದೆ. ಕೆಲ ವಿದ್ಯಾರ್ಥಿಗಳನ್ನು ಮುಂದೆ ಬಿಟ್ಟು ಅರಾಜಕತೆ ಸೃಷ್ಟಿ ಮಾಡುವ ಪ್ರಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ಆದಿಯಾಗಿ ಕೆಲ ಸಂಘಟನೆಗಳು ಹಿಜಾಬ್ ವ್ಯಕ್ತಿ ಸ್ವಾತಂತ್ರ್ಯ ಎಂದು ಹೇಳುತ್ತಿದ್ದಾರೆ.
ವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಮಸೀದಿ ಒಳಗೆ ಮಹಿಳೆಯರಿಗೆ ಪ್ರವೇಶ ಕೊಡಲಿ. ಮಹಿಳೆಯರಿಗೆ ಎಲ್ಲೂ ಪ್ರವೇಶ ನೀಡದವರು ಸರ್ಕಾರಿ ಶಾಲೆಯಲ್ಲಿ ಅವರದ್ದೇ ಆದ ಒಂದು ನಿಯಮ‌ ಮಾಡುತ್ತಾರೆ.

 ತ್ರಿವಳಿ ತಲಾಕ್ ರದ್ದು ಮಾಡುವ ಮೂಲಕ‌ ಭದ್ರತೆ ಕೊಟ್ಟಿದ್ದು ಮೋದಿ ಸರ್ಕಾರ. ಇದನ್ನು ಮುಸ್ಲಿಂ ಮಹಿಳೆಯರು ಅರ್ಥ ಮಾಡಿಕೊಳ್ಳಬೇಕು. ಎಸ್.ಡಿ.ಪಿ.ಐ., ಸಿದ್ದರಾಮಯ್ಯ, ಖಾದರ್ ಹೇಳಿಕೆಯಿಂದ ಈ ರೀತಿ‌ ಮಾಡಬೇಡಿ ಎಂದು ಸಚಿವ ಸುನಿಲ್ ಕುಮಾರ್ ಕಿವಿಮಾತು ಹೇಳಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo