ಏಪ್ರಿಲ್ 1 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರು ಯಶಸ್ವಿನಿ ಯೋಜನೆಗೆ ಚಾಲನೆ ನೀಡುವುದು ಮಾತ್ರವಲ್ಲದೆ, ಹಾಲು ಉತ್ಪಾದಕರ ಅನುಕೂಲಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ ಸ್ಥಾಪನೆಯಾಗುತ್ತಿರುವ ಕ್ಷೀರಸಮೃದ್ಧಿ ಬ್ಯಾಂಕ್ ನ ಲಾಂಛನವನ್ನೂ ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ.
ಏಪ್ರಿಲ್ 1 ರಂದು ರೈತರ ಬಹುದಿನಗಳ ಬೇಡಿಕೆಯಾದ ಯಶಸ್ವಿನಿ ಯೋಜನೆಗೆ ಸಾಂಕೇತಿಕವಾಗಿ ಪುನಃ ಜಾರಿಗೆ ಬರಲಿದ್ದು, ಈ ಸಂಬಂಧ ಸೋಮವಾರದ ನಂತರ ಹಣಕಾಸು, ಸಹಕಾರ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳು ಯೋಜನೆ ಜಾರಿ ಸಂಬಂಧ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
ಯೋಜನೆಯಡಿ ಈ ಹಿಂದೆ ಚಿಕಿತ್ಸೆಗೆ ಗುರುತಿಸಲಾಗಿದ್ದ ಕಾಯಿಲೆಗಳನ್ನು ಬಹುತೇಕ ಯಥಾವತ್ತಾಗಿ ಮುಂದುವರೆಸುವ ಸಾಧ್ಯತೆ ಇದೆ. ಚಿಕಿತ್ಸೆ ನೀಡುವ ಆಸ್ಪತ್ರೆಗಳ ಪಟ್ಟಿಯನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆ ಇದೆ. 2003 ರಲ್ಲಿ ಜಾರಿಗೆ ಬಂದ ಈ ಯೋಜನೆ 2017 ಕ್ಕೆ ಕೊನೆಗೊಂಡಿತ್ತು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ