Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಇಂದು ಕಾರ್ಕಳ ಉತ್ಸವ ಉದ್ಘಾಟನೆ 10-3-2022

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ 'ಕಾರ್ಕಳ ಉತ್ಸವ-2022' ಇದರ ಉದ್ಘಾಟನಾ ಸಮಾರಂಭ ಮಾ.10ರಂದು ಸಂಜೆ 4:30ಕ್ಕೆ ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್‌ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ, ಸಂಸದ ಬಿ.ವೈ. ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಮಣಿರಾಜ್ ಶೆಟ್ಟಿ, ಕಾರ್ಕಳ ಪುರಸಭೆ ಅಧ್ಯಕ್ಷೆ ಸುಮಾ ಕೇಶವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಡಾ. ಎನ್.ಮಂಜುಳಾ, ಬೆಂಗಳೂರು ಬಿಬಿಎಂಪಿ ವಿಶೇಷ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಪಂ ಸಿಇಓ ಡಾ.ನವೀನ್ ಭಟ್ ವೈ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಹಾಗೂ ಇತರರು ಭಾಗವಹಿಸಲಿದ್ದಾರೆ
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo