ಹಿಜಾಬ್ ವಿವಾದ ಕುರಿತಂತೆ ಹೈಕೋರ್ಟ್ ಇಂದು ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ಭಟ್ಕಳದ ಕೆಲವು ವರ್ತಕರು ಇವತ್ತು ಸ್ವಯಂಪ್ರೇರಿತರಾಗಿ ಬಂದ್ ನಡೆಸಿದ್ದರು.
ಇದೀಗ ನಾಳೆಯೂ ಬಂದ್ ಮಾಡುವಂತೆ ಸಂಘಟನೆಯೊಂದು ಕರೆ ನೀಡಿದೆ.
ಹೈಕೋರ್ಟ್ ತೀರ್ಪಿಗೆ ಸಂಬಂಧಿಸಿದಂತೆ ನಾಳೆಯೂ ಭಟ್ಕಳದಲ್ಲಿ ಸ್ವಯಂಪ್ರೇರಿತರಾಗಿ ಬಂದ್ ನಡೆಸಬೇಕು ಎಂದು ತಂಜೀಮ್ ಸಂಘಟನೆ ಮುಸ್ಲಿಂ ಸಮುದಾಯದ ವರ್ತಕರಿಗೆ ಕರೆ ನೀಡಿದೆ ಎನ್ನಲಾಗಿದೆ. ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನಿರಾಕರಿಸಿದ್ದ ಹೈಕೋರ್ಟ್, ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಸರ್ಕಾರ ನೀಡಿದ್ದ ಆದೇಶವನ್ನೇ ಎತ್ತಿಹಿಡಿದು ತೀರ್ಪು ನೀಡಿತ್ತು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ