ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮಾರ್ಚ್ 17, 18 ರಂದು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಹವಾಮಾನ ಇಲಾಖೆ, ಬೆಂಗಳೂರು, ಮೈಸೂರು, ಕೊಡಗು ಜಿಲ್ಲೆಗಳ ಕೆಲವೆಡೆ ಮಾರ್ಚ್ 17 ರಂದು ಮಳೆಯಾಗಲಿದೆ. ಮಾರ್ಚ್ 18 ರಂದು ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ