Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ 16-3-2022

ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೋಳಿ ಹಬ್ಬದ ಬಳಿಕ ಕೈಗೆತ್ತಿಕೊಳ್ಳುವುದಾಗಿ ಸರ್ವೋಚ್ಚ ನ್ಯಾಯಾಲಯ ಹೇಳಿದೆ ಎಂದು ಮೂಲಗಳು ತಿಳಿಸಿವೆ.


'ಸರ್ಕಾರಿ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡುವಂತೆ ನಿರ್ದೇಶಿಸಬೇಕು' ಎಂದು ಕೋರಲಾಗಿದ್ದ ಎಲ್ಲಾ ವೈಯಕ್ತಿಕ ಹಾಗೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿತ್ತು. ಅಲ್ಲದೆ, 'ಈ ವಿಷಯವನ್ನು ದೇಶದಾದ್ಯಂತ ವಿವಾದದ ವಿಷಯವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ' ಎಂಬ ಬಲವಾದ ಸಂಶಯ ವ್ಯಕ್ತಪಡಿಸಿತ್ತು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo