ಬುಧವಾರ ನಗರದ ದಾರುಲ್ ಉಲೂಮ್ ಸಬೀಲುರ್ರಶಾದ್ ನಲ್ಲಿ ನಡೆದ ಉಲಮಾಗಳು, ವಿವಿಧ ಸಂಘ ಸಂಸ್ಥೆಗಳ ಪತ್ರಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಈ ಬಂದ್ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ವಿಸಲು ಪ್ರಯತ್ನಿಸಬಾರದು, ಪ್ರಮುಖವಾಗಿ ಯುವಕರು ಯಾವುದೇ ರೀತಿಯ ರ‌್ಯಾಲಿಗಳನ್ನು ನಡೆಸುವುದಾಗಲಿ, ಘೋಷಣೆಗಳನ್ನು ಕೂಗುವುದಾಗಿ ಮಾಡಬಾರದು ಎಂದು ಅವರು ತಿಳಿಸಿದರು.
ಬಂದ್ ಅತ್ಯಂತ ಶಾಂತಿಯುತವಾಗಿ ನಡೆಯಬೇಕು. ಅದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಅಮೀರ್ ಎ ಶರೀಅತ್ ಕರೆ ನೀಡಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ