Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಸಾಮಾಜಿಕ ಜಾಲತಾಣಗಳು ಪ್ರಜಾಪ್ರಭುತ್ವವನ್ನು ಹಾಳುಮಾಡುತ್ತಿವೆ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ.16-3-2022

ನವದೆಹಲಿ: ಸಾಮಾಜಿಕ ಜಾಲತಾಣಗಳಿಂದ ದೇಶದ ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲಗುತ್ತಿದೆ ಎಂದು ಕಾಂಗ್ರಸ್ ಸಂಸದೆ ಸೋನಿಯಾ ಗಾಂಧಿ ಲೋಕಸಭೆಯಲ್ಲಿ ಹೇಳಿದ್ದಾರೆ.

ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ಅವರು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ವ್ಯವಸ್ಥೆ ನಮ್ಮದು. ಇಲ್ಲಿನ ಚುನಾವಣಾ ರಾಜಕೀಯದ ಮೇಲೆ ಫೇಸ್​ಬುಕ್​ ಸೇರಿದಂತೆ ಇತರ ದೈತ್ಯ ಸಾಮಾಜಿಕ ಮಾಧ್ಯಮಗಳು ವ್ಯವಸ್ಥಿಕವಾಗಿ ಪ್ರಭಾವ ಬೀರುವುದನ್ನು ಮತ್ತು ಹಸ್ತಕ್ಷೇಪ ಮಾಡುವುದನ್ನು ಕೊನೆಗೊಳಿಸಬೇಕು ಎಂದು ಸಲಹೆ ನೀಡಿದರು.

ಅಲ್ಲದೆ ಇದು ಪಕ್ಷ ಮತ್ತು ರಾಜಕೀಯವನ್ನು ಮೀರಿದ ಒತ್ತಾಯವಾಗಿದ್ದು, ಯಾರೇ ಅಧಿಕಾರದಲ್ಲಿದ್ದರೂ ನಮ್ಮ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ನಾವು ರಕ್ಷಿಸಬೇಕಾಗಿದೆ. ಪ್ರಜಾಪ್ರಭುತ್ವದ ಮೇಲೆ ಸಾಮಾಜಿಕ ಮಾಧ್ಯಮಗಳ ದುರುಪಯೋಗ ಹೆಚ್ಚಾಗುತ್ತಿರುವುದು ಅಪಾಯಕಾರಿ. ರಾಜಕೀಯ ನಾಯಕರು, ಪಕ್ಷಗಳು ಮತ್ತು ಅವರನ್ನು ಪ್ರತಿನಿಧಿಸುವವರು ತಮ್ಮ ರಾಜಕೀಯ ನಿರೂಪಣೆಗಳನ್ನು ರೂಪಿಸಲು ಫೇಸ್​ಬುಕ್​, ಟ್ವಿಟರ್​ನಂತಹ ಜಾಗತಿಕ ಕಂಪನಿಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ ಎಂದು ದೂರಿದರು.

ಇನ್ನೂ ಈ ಜಾಗತಿಕ ಸೋಷಿಯಲ್ ಮೀಡಿಯಾ ಕಂಪನಿಗಳು ಎಲ್ಲ ಪಕ್ಷಗಳಿಗೆ ಸಮಾನವಾಗಿ ಮೈದಾನ ಒದಗಿಸುತ್ತಿಲ್ಲ ಎಂಬುದು ಪದೇ ಪದೆ ಸಾರ್ವಜನಿಕರ ಗಮನಕ್ಕೆ ಬರುತ್ತಿದೆ. ಭಾವನಾತ್ಮಕವಾಗಿ ಉದ್ರೇಕಿಸುವ ಮೂಲಕ ಯುವ ಮತ್ತು ಹಿರಿಯರ ಮನಸ್ಸುಗಳಲ್ಲಿ ದ್ವೇಷ ತುಂಬುತ್ತಿವೆ ಎಂದು ಕಿಡಿಕಾರಿದರು.

ಹಾಗೇ ಆಡಳಿತಾರೂಢ ಸಂಸ್ಥೆಗಳ ಸಹಕಾರದೊಂದಿಗೆ ಫೇಸ್​ಬುಕ್​ ಮೂಲಕ ಸಾಮಾಜಿಕ ಸೌಹಾರ್ದತೆಗೆ ಭಂಗ ಉಂಟು ಮಾಡುತ್ತಿರುವ ಈ ರೀತಿಯ ಅಬ್ಬರದ ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಅವರು ಕಳವಳ ವ್ಯಕ್ತಪಡಿಸಿದರು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo