ಈ ಕುರಿತು ಬೆಂಗಳೂರು ಕೆಪಿಸಿಸಿ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಆಯ್ಕೆ ಮಾಡಿಕೊಂಡಿದ್ದು ಕಾಂಗ್ರೆಸ್ ಪಕ್ಷವನ್ನು. ದೇಶಕ್ಕಾಗಿ ಕಾಂಗ್ರೆಸ್ ತ್ಯಾಗ ಬಲಿದಾನ ಎಲ್ಲವನ್ನೂ ಕೊಟ್ಟಿದೆ. ಬಡವನಿಗೆ, ದಲಿತನಿಗೆ, ಹಿಂದುಳಿದವರ ಧ್ವನಿ ಈ ಕಾಂಗ್ರೆಸ್. ಜಾತ್ಯಾತೀತ ಸಿದ್ದಾಂತಗಳು ಇಷ್ಟ ಆಯ್ತು. ಹಾಗಾಗಿ ನಾನು ಕಾಂಗ್ರೆಸ್ ಸೇರಿದೆ ಎಂದು ಹೇಳಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಮುಗಿದೇ ಹೋಯ್ತು, ಧೂಳೀಪಟ ಅಂತ ಬರೆದರು. ಪ್ರಿಯಾಂಕ ಗಾಂಧಿ 200 ಕ್ಕೂ ಹೆಚ್ಚು ಸಭೆ ಮಾಡಿದ್ದಾರೆ. ಪಂಜಾಬ್ ನಲ್ಲಿ ನಮ್ಮ ಅಂತರಿಕ ಕಲಹದಿಂದ ಕೈ ತಪ್ಪಿದೆ. ಯಡಿಯೂರಪ್ಪ, ಮುಖ್ಯ ಮಂತ್ರಿಗಳು ಏನೇ ಮಾತಾಡಲಿ. ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದಾರೆ, ನಮ್ಮ ಕಾಲ ಮೇಲೆ ನಾವು ನಿಲ್ಲಲಿದ್ದೇವೆ ಎಂದು ತಿಳಿಸಿದರು.
ಕಳೆದ 3 ದಶಕಗಳಿಂದ ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡಿರುವೆ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಸೇರಿದಂತೆ ದೊಡ್ಡ ಸ್ಟಾರ್ಗಳ ಜೊತೆ ಕೆಲಸ ಮಾಡಿರುವೆ. ಸಿನಿಮಾ ಕ್ಷೇತ್ರ ನನಗೆ ಎಲ್ಲವನ್ನೂ ಕೊಟ್ಟಿದೆ. ನನಗೆ ಬಹಳಷ್ಟು ಮಂದಿ ರಾಜಕೀಯ ಯಾಕೆ ಅಂತ ಪ್ರಶ್ನೆ ಮಾಡಿದರು. ಆ ಪ್ರಶ್ನೆ ಹಾಗೇ ಇರಲಿ ಮುಂದೆ ಉತ್ತರ ಸಿಗಲಿದೆ’ ಎಂದು ಕಾಂಗ್ರೆಸ್ ಸೇರ್ಪಡೆ ಬಳಿಕ ಎಸ್. ನಾರಾಯಣ್ ಮಾತನಾಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ