Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಹಿಜಾಬ್ ವಿವಾದ: ಕರ್ನಾಟಕ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮತ್ತೊಂದು ಅರ್ಜಿ ಸಲ್ಲಿಕೆ17-3-2022

*ಹಿಜಾಬ್ ವಿವಾದ: ಕರ್ನಾಟಕ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮತ್ತೊಂದು ಅರ್ಜಿ ಸಲ್ಲಿಕೆ*

ನವದೆಹಲಿ:- ಇಸ್ಲಾಂನಲ್ಲಿ ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೇಳಿ ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಅರ್ಜಿ ಸಲ್ಲಿಸಲಾಗಿದೆ.


ಸಜೀದಾ ಬೇಗಂ ಎಂಬುವವರು ಇಂದು ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಿದ್ದು, ಕರ್ನಾಟಕ ಹೈಕೋರ್ಟ್‌ನಲ್ಲಿ ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದ ವಿಚಾರಣೆಯಲ್ಲಿ ತನ್ನನ್ನು ಕಕ್ಷಿದಾರನನ್ನಾಗಿ ಸೇರಿಸಬೇಕೆಂದು ಕೋರಿದ್ದಾರೆ.
ಸಜೀದಾ ಬೇಗಂ ಅವರು ವಕೀಲರಾದ ತಲ್ಹಾ ಅಬ್ದುಲ್ ರಹಮಾನ್ ಮತ್ತು ಇತರರ ಮೂಲಕ ಸಲ್ಲಿಸಿದ ಹೊಸ ಅರ್ಜಿಯಲ್ಲಿ, ಹದಿಹರೆಯದ ಹುಡುಗಿಯರು ಶಿಕ್ಷಣ ಪಡೆಯಲು ಹೋಗುವಾಗ ತಮ್ಮನ್ನು ತಾವು ಸಾಧಾರಣವಾಗಿ ಬಟ್ಟೆಯಿಂದ ಮುಚ್ಚಿಕೊಳ್ಳುವುದರಿಂದ “ಸಾರ್ವಜನಿಕ ಸುವ್ಯವಸ್ಥೆಗೆ” ಯಾವುದೇ ಅಪಾಯವಿಲ್ಲ ಎಂದು ಹೇಳಿದ್ದಾರೆ.


“ಸರ್ಕಾರಿ ಆದೇಶ ಹಿಜಾಬ್ ನಿಷೇಧಿಸುವುದಿಲ್ಲವಾದ್ದರಿಂದ ಹೈಕೋರ್ಟ್ ಆಡಳಿತತಾತ್ಮಕ ಕಾನೂನಿನ ಸರಳ ಅಂಶದ ಮೇಲೆ ಮಾತ್ರ ಸಮಸ್ಯೆಯನ್ನು ನಿರ್ಧರಿಸಬೇಕಿತ್ತು” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo