ಅಸನಿ ಚಂಡಮಾರುತ ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳ ಉದ್ದಕ್ಕೂ ಬೀಸಲಿದ್ದು, ಗಂಟೆಗೆ 70-90 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಬದಲಾವಣೆಯಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
ಮಾರ್ಚ್ 20 ಹಾಗೂ 21ರಂದು ಕರಾವಳಿ ಭಾಗದ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇಂದು ಹಾಗೂ ನಾಳೆ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ