ಉಕ್ರೇನ್‌ನ ಖಾರ್ಕಿವ್‌ನಲ್ಲಿ ರಷ್ಯಾ ದಾಳಿಗೆ ಸಾವಿಗೀಡಾದ ಹಾವೇರಿ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಭಾನುವಾರ ಕರ್ನಾಟಕಕ್ಕೆ ಆಗಮಿಸಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ನಡೆದ ಸರ್ವಪಕ್ಷಗಳ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಭಾಗಿಯಾದ ಸಿಎಂ, ರಷ್ಯಾ-ಉಕ್ರೇನ್ ಸಂಘರ್ಷದ ಮಧ್ಯೆ ಮಾರ್ಚ್ 1ರಂದು ರಷ್ಯಾ ನಡೆಸಿದ್ದ ಶೆಲ್ ದಾಳಿಯಲ್ಲಿ ನವೀನ್ ಗ್ಯಾನಗೌಡರ್ ಮೃತಪಟ್ಟಿದ್ದರು. ಭಾನುವಾರ ಸಂಜೆ ಹಾವೇರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಉಕ್ರೇನ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿ ನಿರತರಾದ ಕೇಂದ್ರ ಸರಕಾರ , ನವೀನ್ ಮೃತದೇಹ ಭಾರತಕ್ಕೆ ತರಲು ತುಂಬಾ ಪ್ರಯತ್ನ ನಡೆಸುತ್ತಿತ್ತು. ಇದರ ಫಲವಾಗಿ ಮೃತದೇಹ ಇದೀಗ ಭಾರತಕ್ಕೆ ವಾಪಸ್ ಆಗುತ್ತಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ