ಬೆಂಗಳೂರು: ಕರ್ನಾಟಕದಲ್ಲಿ ಕೂಡ ಇಂದು ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮಾ.20ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮಾ. 21ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳ ಕೆಲವು ಕಡೆ ಮಾ.20 ಮತ್ತು ಮಾ.21ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆಎಂದು ತಿಳಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ