ಗುಜರಾತ್‌ನ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ. ಭಗವದ್ಗೀತೆ ಬೋಧನೆಯಿಂದ ಮಕ್ಕಳಿಗೆ ಅನುಕೂಲವಾಗಲಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಅವರಲ್ಲಿ ನೈತಿಕತೆ ಬೆಳೆಸುವ ಅಗತ್ಯವಿದೆ. ಹೀಗಾಗಿಯೇ ಈ ವಿಚಾರದಲ್ಲಿ ಅನಗತ್ಯವಾಗಿ ಗೊಂದಲ ಉಂಟು ಮಾಡಬಾರದು' ಎಂದುಸುರಪುರ ತಾಲ್ಲೂಕಿನ ದೇವತ್ಕಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.
'ಕರ್ನಾಟಕದ ಶಾಲಾ ಪಠ್ಯದಲ್ಲಿಯೂ ಭಗವದ್ಗೀತೆ ಅಳವಡಿಸಲು ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇಲಾಖೆ ಮೊದಲು ವರದಿ ನೀಡಲಿ. ನಾನು ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ' ಎಂದ ಅವರು, 'ಮಕ್ಕಳ ವ್ಯಕ್ತಿತ್ವ ವಿಕಸನವೇ ಸರ್ಕಾರದ ಮುಖ್ಯ ಗುರಿ. ಆ ನಿಟ್ಟಿಯಲ್ಲಿ ಸೂಕ್ತ ಹೆಜ್ಜೆ ಇಡುತ್ತೇವೆ' ಎಂದರು.
'ಭಗವದ್ಗೀತೆ ಅಳವಡಿಸಿದರೆ ಮಾತ್ರ ಮಕ್ಕಳಲ್ಲಿ ನೈತಿಕೆ ಬೆಳೆಯುತ್ತದೆಯೇ? ಈಗ ನೈತಿಕ ಶಿಕ್ಷಣ ಸಿಗುತ್ತಿಲ್ಲವೇ' ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗರಂ ಆದ ಪ್ರಸಂಗ ನಡೆಯಿತು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ