ರಾಜ್ಯದಲ್ಲಿ ರೈತರ ಮನೆ ಬಾಗಿಲಿಗೆ ಕಂದಾಯ ದಾಖಲೆ ವಿತರಿಸುವ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಈ ಕಾರ್ಯಕ್ರಮದಲ್ಲಿ ದಾಖಲೆ ಸ್ವೀಕೃತವಾಗಿರದ ರೈತರಿಗೆ ಮಾರ್ಚ್ 21 ರಿಂದ 27 ರವರೆಗೆ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ದಾಖಲೆಗಳನ್ನು ಉಚಿತವಾಗಿ ವಿತರಿಸಲು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕಂದಾಯ ಇಲಾಖೆ ಉಪಕಾರ್ಯದರ್ಶಿ ಡಾ.ಎಂ.ಎಸ್. ರಾಜೇಂದ್ರ ಪ್ರಸಾದ್ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ರೈತರಿಗೆ ಕಂದಾಯ ದಾಖಲೆ ಉಚಿತವಾಗಿ ತಲುಪಿಸಿರುವ ಬಗ್ಗೆ ಖಾತರಿಗೆ ಆಧಾರ್ ಕಾರ್ಡ್ ಬಳಸಿ ಗುರುತಿಸಬೇಕು. ರೈತರ ಮೊಬೈಲ್ ಸಂಖ್ಯೆ ಲಭ್ಯವಿದ್ದರೆ ಸಂಗ್ರಹಿಸಬೇಕು ಎಂದು ತಿಳಿಸಿದ್ದಾರೆ.
ಕಂದಾಯ ಇಲಾಖೆಯ ದಾಖಲೆಗಳಾದ ಪಹಣಿ, ಅಟ್ಲಾಸ್, ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರ ರೈತರ ಮನೆ ಬಾಗಿಲಿಗೆ ತಲುಪಿಸುವ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದು, ಈವರೆಗೆ 50 ಲಕ್ಷ ರೈತ ಕುಟುಂಬಳಿಗೆ 4 ಕೋಟಿ ದಾಖಲೆ ನೀಡಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ