ಬೆಂಗಳೂರು: ಟ್ರಮಡಾಲ್ ನೋವು ನಿವಾರಕ ಔಷಧಿಗಳನ್ನು ಅನಧಿಕೃತವಾಗಿ ನೆರೆಯ ಪಾಕಿಸ್ತಾನಕ್ಕೆ ರಫ್ತು ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ನಾಲ್ವರನ್ನು ಬಂಧಿಸಲಾಗಿದೆ.
ಬೆಂಗಳೂರು ವಲಯದ ಮಾದಕ ವಸ್ತು ನಿಯಂತ್ರಣ ದಳ(NCB ) ಅಧಿಕಾರಿಗಳು ತೆಲಂಗಾಣ ಮೂಲದ ಲ್ಯೂಸೆಂಟ್ ಡ್ರಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ, ಉದ್ಯಮಿ ಸೇರಿದಂತೆ ನಾಲ್ವರನ್ನು ಬೆಂಗಳೂರಿನಲ್ಲಿ ತಮ್ಮ ವಶಕ್ಕೆ ಪಡೆದಿದ್ದಾರೆ.
ತೆಲಂಗಾಣದಲ್ಲಿರುವ ಈ ಕಂಪನಿಯು ಯಾವುದೇ ಪರವಾನಗಿ ಇಲ್ಲದೆ ಪಾಕಿಸ್ತಾನಕ್ಕೆ ವಾರ್ಷಿಕವಾಗಿ 25 ಸಾವಿರ ಕೆಜಿ ಟ್ರಮಡಾಲ್ ಡ್ರಗ್ ರಫ್ತು ಮಾಡುತ್ತಿತ್ತು. ಡೆನ್ಮಾರ್ಕ್, ಜರ್ಮನಿ, ಮಲೇಷ್ಯಾಗೂ ಈ ಔಷಧಿಯನ್ನು ರಫ್ತು ಮಾಡುತ್ತಿತ್ತು. ಹೀಗಾಗಿ ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ದಾಳಿ ನಡೆಸಿದ ಎನ್ ಸಿಬಿ ಅಧಿಕಾರಿಗಳು ಫಾರ್ಮಾ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ