Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಹಿಜಾಬ್ ತೀರ್ಪು ಪ್ರಕಟಿಸಿದ್ದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಪ್ರಕರಣ ಆರೋಪಿಗಳಬಂಧನ20-3-2022

ಹಿಜಾಬ್ ತೀರ್ಪು ಪ್ರಕಟಿಸಿದ ರಾಜ್ಯ ಹೈಕೋರ್ಟ್‌ನ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿರುವ ಗಂಭೀರ ಆರೋಪದಡಿ ಇಬ್ಬರು ಕಿಡಿಗೇಡಿಗಳನ್ನು ತಮಿಳುನಾಡು ಪೊಲೀಸರು ಅರೆಸ್ಟ್ ಮಾಡಿದ್ದಾರೆ.


ತಮಿಳುನಾಡಿನ ತಿರುನೆಲ್‌ವೇಲಿ ಎಂಬಲ್ಲಿ ಕೊವಾಯಿ ರಹಮುತುಲ್ಲಾ ಹಾಗು ತಂಜಾವೂರಿನಲ್ಲಿ ಎಸ್.ಜಮಾಲ್ ಮೊಹಮ್ಮದ್ ಉಸ್ಮಾನಿ ಎಂಬಾತನನ್ನು ಶನಿವಾರ ರಾತ್ರಿ ಸೆರೆ ಹಿಡಿಯಲಾಗಿದೆ. ಈ ಇಬ್ಬರು ದುಷ್ಕರ್ಮಿಗಳು ತಮಿಳುನಾಡು ತೌಹೀದ್ ಜಮಾತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.


ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವು ದೂರುಗಳು ದಾಖಲಾದ ಬೆನ್ನಲ್ಲೇ ಈ ಆರೋಪಿಗಳಿಗೆ ಪೊಲೀಸರು ಕೈಕೋಳ ತೊಡಿಸಿದ್ದಾರೆ. ಇದೇ ವೇಳೆ ಈ ಇಬ್ಬರ ಹೊರತಾಗಿ ಹಲವರ ವಿರುದ್ಧ ದೂರುಗಳು ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.


ಜಾರ್ಖಂಡ್‌ನಲ್ಲಿ ಬೆಳಗಿನ ವಾಕಿಂಗ್‌ ವೇಳೆ ಜಿಲ್ಲಾ ನ್ಯಾಯಾಧೀಶರೊಬ್ಬರ ಮೇಲೆ ವಾಹನ ಹರಿಸಿ ಕೊಂದು ಹಾಕಲಾಗಿತ್ತು. ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಕೂಡಾ ಎಲ್ಲಿಗೆ ಬೆಳಗಿನ ವಾಕ್‌ ಹೋಗುತ್ತಾರೆ ಅನ್ನೋದು ಜನರಿಗೆ ಗೊತ್ತಿದೆ ಎಂದು ಹೇಳುವ ಮೂಲಕ ಕೊಲೆ ಬೆದರಿಕೆ ಹಾಕಿದ್ದಾನೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo